ಮಡಿಕೇರಿ : ಇದೇ ಅಕ್ಟೋಬರ್ 17 ರಂದು ರಾತ್ರಿ 7.21 ಗಂಟೆಗೆ ಸಲ್ಲುವ ಮೇಷ ಲಗ್ನದಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋಧ್ಬವ ಸಂಭವಿಸಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಭಾಗಮಂಡಲ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳ ಆಡಳಿತಾಧಿಕಾರಿ ಡಾ.ನಂಜುಂಡೇಗೌಡ ತಿಳಿಸಿದ್ದಾರೆ.
ಸೆಪ್ಟೆಂಬರ್ 27 ರಂದು ಬೆಳಗ್ಗೆ 11.05 ನಿಮಿಷಕ್ಕೆ ಸಲ್ಲುವ ವೃಚ್ಛಿಕ ಲಗ್ನದಲ್ಲಿ “ಪತ್ತಾಯಕ್ಕೆ ಅಕ್ಕಿ ಹಾಕುವುದು”, ಅಕ್ಟೋಬರ್ 05 ರಂದು ಬೆಳಗ್ಗೆ 09.35 ನಿಮಿಷಕ್ಕೆ ಸಲ್ಲುವ ವೃಚ್ಛಿಕ ಲಗ್ನದಲ್ಲಿ “ಆಜ್ಞಾ ಮುಹೂರ್ತ”. ಅಕ್ಟೋಬರ್ 15 ರಂದು ಬೆಳಿಗ್ಗೆ 11.45 ನಿಮಿಷಕ್ಕೆ ಸಲ್ಲುವ ಧನುರ್ ಲಗ್ನದಲ್ಲಿ “ಅಕ್ಷಯ ಪಾತ್ರೆ ಇರಿಸುವುದು” ಮತ್ತು 04.15 ನಿಮಿಷಕ್ಕೆ ಸಲ್ಲುವ ಕುಂಭ ಲಗ್ನದಲ್ಲಿ “ಕಾಣಿಕೆ ಡಬ್ಬಿಗಳನ್ನು ಇಡುವುದು”. ಅಕ್ಟೋಬರ್ 17 ರ ಸೋಮವಾರ ರಾತ್ರಿ 07.21 ಗಂಟೆಗೆ ಸಲ್ಲುವ ಮೇಷ ಲಗ್ನದಲ್ಲಿ “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ” ಜರುಗಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಭಾಗಮಂಡಲ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳ ಆಡಳಿತಾಧಿಕಾರಿ ಡಾ.ನಂಜುಂಡೇಗೌಡ ಅವರು ತಿಳಿಸಿದ್ದಾರೆ.
Health Tips : ʻಹೊಟ್ಟೆಯ ಉರಿಯೂತʼ ಕಾಡುತ್ತಿದ್ಯಾ? ತಕ್ಷಣದ ಪರಿಹಾರವನ್ನು ಪಡೆಯಲು ಈ ʻಮನೆಮದ್ದʼನ್ನು ಪ್ರಯತ್ನಿಸಿ