ಬೆಂಗಳೂರು: ನಗರ ಕೆರೆ ಒತ್ತುವರಿ ವಿಚಾರಕ್ಕೆ ಸಂಬಂಧಿಸಿ ಕಂದಾಯ ಸಚಿವ ಆರ್. ಅಶೋಕ್ ಪ್ರತಿಕ್ರಿಯೆ ನೀಡುವ ವೇಳೆ ಜಾರ್ಜ್ ಮಧ್ಯ ಪ್ರವೇಶಿಸಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸಿಎಂ ಗರಂ ಆಗಿ ಕುಂಬಳಕಾಯಿ ಕಳ್ಳ ಅಂದರೆ ನೀವ್ಯಾಕೆ ಹೆಗಲು ಮುಟ್ಟಿ ಕೊಳ್ಳುತ್ತೀರಿ ಎಂದಿದ್ದಾರೆ.
ಕಳೆದ 2015ರದಲ್ಲಿ ಕಂದಾಯ ಇಲಾಖೆಯಿಂದ ಆದೇಶ ಹೊರಡಿಸಲಾಗಿತ್ತು. ನೀರು ಹರಿಯುವುದು ನಿಂತ ಕೆರೆಗಳ ಪುನಶ್ಚೇತನಕ್ಕಾಗಿ ಕ್ರಮ ಕೈಗೊಳ್ಳಲಾಗುವುದು. ಆದರೆ ಅದಕ್ಕೆ ಅವಕಾಶ ಸಿಕ್ಕಲೇ ಇಲ್ಲ. ನೀವ್ಯಾಕೆ ಮಧ್ಯೆ ಪ್ರವೇಶ ಮಾಡುತ್ತೀರಿ ಎಂದು ಜಾರ್ಜ್ ಗೆ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಜಾರ್ಜ್ ನಾನು ಮಂತ್ರಿಯಾಗಿದ್ದೆ ಹಾಗಾಗಿ ಮಾತನಾಡುತ್ತಿದ್ದೇನೆ ಎಂದು ಸಮರ್ಥಿಸಿಕೊಳ್ಳಲು ಯತ್ನಿಸಿದರು.