ಬೆಂಗಳೂರು: ಎಲೆಕ್ಷನ್ ಹೊತ್ತನಲ್ಲಿ ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಶಾಕ್ ಎದುರಾಗಿದೆ. ಇದೀಗ ಡಿ.ಕೆ ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಇಡಿ ವಿಚಾರಣೆಗೆ ಒಳಗಾಗಿದ್ದಾರೆ. ಈ ಬೆನ್ನಲ್ಲೇ ಐಟಿ ಶಾಕ್ ಕೊಡಲಿದೆ.
ಇದರಿಂದ ಚುನಾವಣೆ ಸಮಯದಲ್ಲಿ ಡಿ.ಕೆ ಶಿವಕುಮಾರ್ ಗೆ ಸಂಕಷ್ಟ ಎದುರಾಗಲಿದೆ. ಡಿ.ಕೆ ಶಿವಕುಮಾರ್ ವಿರುದ್ಧ ಪ್ರಕರಣ ರದ್ದುಪಡಿಸಿದ್ದ ಹೈಕೋರ್ಟ್ ಆದೇಶಕ್ಕೆ ತಡೆ ಹಿಡಿಯಲಾಗಿದೆ. ಸುಪ್ರೀಂಕೊರ್ಟ್ ನಿಂದ ತಡೆ ಹಿಡಿಯಲಾಗಿದೆ. ನ್ಯಾ. ಸಂಜೀವ್ ಖನ್ನ ನೇತೃತ್ವದ ದ್ವಿಸದಸ್ಯ ಪೀಠದಿಂದ ತಡೆ ಹಿಡಿಯಲಾಗಿದೆ .
2018 ರಲ್ಲಿ ಬಿಡದಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ದಾಖಲೆ ವಶಕ್ಕೆ ಪಡೆಯಲಾಗಿದೆ. ಡಿ.ಕೆ ಶಿವಕುಮಾರ್ ಕೋಣೆಯಲ್ಲಿ ಇ ಡಿ ಅಧಿಕಾರಿಗಳು ದಾಖಲೆ ವಶಕ್ಕೆ ಪಡೆದುಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿ ತನಿಖೆಗೆ ಹೈಕೋರ್ಟ್ ತಡೆ ಹಿಡಿದಿದೆ. ಆದರೆ ಹೈ ಕೋರ್ಟ್ ಆದೇಶ ಪ್ರಶ್ನೆ ಯನ್ನು ಐಟಿ ಮಾಡಿತ್ತು. ಇದೀಗ 6 ವಾರಗಳ ಬಳಿಕ ಮತ್ತೆ ಸುಪ್ರೀಂಕೋರ್ಟ್ ವಿಚಾರಣೆ ಕೈಗೆತ್ತಿಕೊಳ್ಳಲಿದೆ.