ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಗಂಟೆಮಕ್ಕಿ ಗ್ರಾಮದಲ್ಲಿ ವೃದ್ಧೆಯನ್ನು ಆಸ್ಪತ್ರೆಗೆ ಕೊಂಡಯ್ಯಲು ದಾರಿ ಇಲ್ಲದ ಕಾರಣಕ್ಕೆ ಜೋಳಿಗೆಯಲ್ಲಿ ಕಟ್ಟಿಕೊಂಡು ಆಸ್ಪತ್ರೆಗೆ ತೆಗೆದುಕೊಂಡು ಹೋಗುತ್ತಿರುವ ಘಟನೆ ನಡೆದಿದೆ.
BIGG NEWS: ಸಿದ್ದರಾಮಯ್ಯ ಹೇಳಿಕೆ ಬಿಎಸ್ ವೈ ಕಿಡಿ;ನಾಲಿಗೆ ಹದ್ದು ಬಸ್ತಿನಲ್ಲಿ ಇಟ್ಟುಕೊಳ್ಳಲಿ- ಬಿ.ಎಸ್ ಯಡಿಯೂರಪ್ಪ
85 ವರ್ಷದ ವೃದ್ಧೆ ವೆಂಕಮ್ಮನವರಿಗೆ ಕಳೆದೊಂದು ವಾರದಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ದಾರಿ ಇಲ್ಲದೆ ಕುಟುಂಬಸ್ಥರು ಮನೆಯಲ್ಲೇ ಚಿಕಿತ್ಸೆ ನೀಡುತ್ತಿದ್ದರು. ಆರೋಗ್ಯ ತೀವ್ರ ಹದಗೆಟ್ಟಾಗ ಸ್ಥಳೀಯರು ಹಾಗೂ ಸಂಬಂಧಿಕರು ಜೋಳಿಗೆ ಕಟ್ಟಿಕೊಂಡು ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಗ್ರಾಮದಲ್ಲಿ ಸುಮಾರು 8-10 ಮನೆಗಳಿದ್ದು, ಯಾರಿಗೂ ಓಡಾಡಲು ಜಾಗವಿಲ್ಲ. ಜಮೀನಿಗೆ ಹೋಗಲು ದಾರಿ ಇಲ್ಲ. ಹೊಲ-ಗದ್ದೆಗಳಿಗೆ ಗೊಬ್ಬರ, ಮನೆಗೆ ರೇಷನ್ ಎಲ್ಲವನ್ನು ತಲೆ ಮೇಲೆ ಹೊತ್ತುಕೊಂಡು ಹೋಗಬೇಕು.ಳೀಯರು ಹತ್ತಾರು ವರ್ಷಗಳಿಂದ ರಸ್ತೆ ನಿರ್ಮಿಸಿ ಕೊಡುವಂತೆ ಅಧಿಕಾರಿಗಳಿಗೆ ನೂರಾರು ಮನವಿ ನೀಡಿದ್ದಾರೆ. ಆದರೆ ಯಾವುದೇ ಪ್ರೋಜನೆ ಆಗಿಲ್ಲವೆಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ.