ಬೆಂಗಳೂರು: ವಿಧಾನಪರಿಷತ್ ನಲ್ಲಿ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ತಿದ್ದುಪಡಿ ವಿಧೇಯಕ 2022 ಮತ್ತು ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕವನ್ನು ಅಂಗೀಕರಿಸಲಾಯಿತು.
ವಿಧಾನ ಪರಿಷತ್ನ ಶಾಸನ ರಚನೆ ಕಲಾಪದಲ್ಲಿ ವಿಧಾನಸಭೆಯಿಂದ ಅಂಗೀಕಾರ ರೂಪದಲ್ಲಿರುವ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ತಿದ್ದುಪಡಿ ವಿಧೇಯಕ 2022 ಅನ್ನು ಮುಖ್ಯಮಂತ್ರಿಗಳ ಪರವಾಗಿ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಮಂಡಿಸಿದರು. ಠೇವಣಿದಾರರ ಹಿತಾಸಕ್ತಿಗೆ ತಿದ್ದುಪಡಿ ತರಲಾಗಿದ್ದು, ಅಂಗೀಕರಿಸುವಂತೆ ಮನವಿ ಮಾಡಿದರು.