ಬೆಂಗಳೂರು : ಗುತ್ತಿಗೆ ಪೌರ ಕಾರ್ಮಿಕರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಪೌರ ಕಾರ್ಮಿಕರನ್ನು ಸರ್ಕಾರಿ ನೌಕರರೆಂದು ನೇಮಕಾತಿ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಇಂದು ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯದ ನಗರಸಭೆ, ಪುರಸಭೆ ಮತ್ತು ಇತರೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 11,333 ಪೌರ ಕಾರ್ಮಿಕರನ್ನು ವಿಶೇಷ ನೇಮಕಾತಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲು ಸಚಿವ ಸಂಪುಟ ಅನುಮೋದನೆ ನೀಡಿದೆ.
ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ ಪೌರ ಕಾರ್ಮಿಕರನ್ನು ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಹಾಗೂ ಬಿಬಿಎಂಪಿಯ 3673 , ನಗರಸಭೆ ಮತ್ತು ಪುರಸಭೆ 5533 ಹಾಗೂ ಮಹಾನಗರ ಪಾಲಿಕೆಗಳಲ್ಲಿನ 1927 ಗುತ್ತಿಗೆ ನೌಕರರನ್ನು ಖಾಯಂ ಮಾಡಿಕೊಳ್ಳಲಾಗುತ್ತಿದೆ. ಈ ಮೂಲಕ ಹೊರ ಗುತ್ತಿಗೆ ಪೌರ ಕಾರ್ಮಿಕರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ.
BIGG NEWS : ಕೊಪ್ಪಳದಲ್ಲಿ ‘ತ್ರಿವಳಿ ತಲಾಖ್’ ಇನ್ನೂ ಜೀವಂತ : ಗಂಡನ ವಿರುದ್ಧ ಪ್ರಕರಣ ದಾಖಲಿಸಿದ ಮಹಿಳೆ