ಮೈಸೂರು : ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮಕ್ಕೆ ದಿನಗಣನೆ ಆರಂಭವಾಗಿದೆ. ದಸರಾ ಹಬ್ಬದ ಹಿನ್ನೆಲೆ ಅರಮನೆಯಲ್ಲಿ ಎಲ್ಲಾ ತಯಾರಿ ಜೋರಾಗಿ ನಡೆಯುತ್ತಿದೆ.
ಹೌದು, ಎರಡು ವರ್ಷಗಳ ಬಳಿಕ ಮೈಸೂರು ದಸರಾ (Mysuru Dasara 2022) ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ.
ನಾಳೆ ಅಂದ್ರೆ ಸೆಪ್ಟೆಂಬರ್ 20ರಂದು ಸಿಂಹಾಸನ ಜೋಡಣೆ ಕೆಲಸ ನಡೆಯಲಿದೆ. ಅರಮನೆಯ ನೆಲಮಾಳಿಗೆಯ ಸ್ಟ್ರಾಂಗ್ ರೂಮ್ನಲ್ಲಿರುವ ರತ್ನ ಖಚಿತ ಸಿಂಹಾಸನವನ್ನು ದರ್ಬಾರ್ ಹಾಲ್ಗೆ ತರಲಾಗುತ್ತದೆ. ಇದಕ್ಕೂ ಮುನ್ನ ಹೋಮ ಶಾಂತಿ ಬಳಿಕವೇ ಸ್ಟ್ರಾಂಗ್ ರೂಮ್ ತೆರೆಯಲಾಗುತ್ತದೆ. ಈ ಹಿನ್ನೆಲೆ ಅರಮನೆ ಪ್ರವೇಶಕ್ಕೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.
ಇನ್ನೂ, ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ವತಿಯಿಂದ ಏಕೀಕೃತ ಟಿಕೆಟ್ (ಕಾಂಬೋ ಟಿಕೆಟ್) ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಏಕೀಕೃತ ಟಿಕೆಟ್ ಪಡೆಯುವುದರಿಂದ ಪ್ರವಾಸಿಗರು ಹಾಗೂ ಸಾರ್ವಜನಿಕರು 5 ಪ್ರವಾಸಿ ಸ್ಥಳಗಳಾದ ಮೈಸೂರು ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ರೈಲ್ವೆ ಮ್ಯೂಸಿಯಂ ಹಾಗೂ ಕೆಆರ್ ಎಸ್ ಬೃಂದಾವನಕ್ಕೆ ತೆರಳಬಹುದು.
ಟಿಕೆಟ್ಗಾಗಿ ಸರದಿ ಸಾಲಿನಲ್ಲಿ ನಿಲ್ಲುವ ಅಗತ್ಯವಿರುವುದಿಲ್ಲ. ಒಂದೇ ಟಿಕೆಟ್ನಲ್ಲಿ 5 ಸ್ಥಳಗಳಲ್ಲಿ ಪ್ರವಾಸ ಮಾಡಬಹುದು. ಏಕೀಕೃತ ಟಿಕೆಟ್ವ್ಯವಸ್ಥೆಯು ನಾಳೆಯಿಂದ ಆರಂಭಗೊಂಡು, ಅಕ್ಟೋಬರ್ 5ರ ವರೆಗೆ ಚಾಲ್ತಿಯಲ್ಲಿರುತ್ತದೆ. ಒಂದು ಟಿಕೆಟ್ ಬೆಲೆ 500 ರೂ.ಗಳಾಗಿದ್ದು, ಮಕ್ಕಳಿಗೆ ಟಿಕೆಟ್ ದರವನ್ನು 250 ರೂ.ಗಳಿಗೆ ನಿಗದಿಪಡಿಸಲಾಗಿದೆ.
BIG NEWS: ಪಾಕಿಸ್ತಾನದ ಮೇಲೆ ಪರಾಕ್ರಮ ಮೆರೆದಿದ್ದ ಭಾರತದ ಮಿಗ್ -21 ಸ್ಕ್ವಾಡ್ರನ್ ಜೆಟ್ ಸೇನೆಯಿಂದ ನಿವೃತ್ತಿ