ಬೆಂಗಳೂರು: 35ರನ್ನು ಒಳಗೊಂಡತೆ ಕನ್ನಡ, ಹಿಂದೂ, ರೈತ, ಬಿಜೆಪಿ ಪರ ವಿರುದ್ದ ದಾಖಲಾಗಿದ್ದ ಕ್ರಿಮಿನಲ್ ಕೇಸ್ಗಳು ವಾಪಸ್ಸು ತೆಗೆದುಕೊಳ್ಳುವುದಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕೇಸು ವಾಪಸ್ಸು ತೆಗೆದುಕೊಳ್ಳುವುದಕ್ಕೆ ಸಂಬಂಧಪಟ್ಟಂತೆ ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಲಾಗಿತ್ತು, ಸಮಿತಿ ನೀಡಿದ ವರದಿ ಆಧಾರದ ಮೇಲೆ ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.
SC/ST, BPL ಕಾರ್ಡ್ದಾರರಿಗೆ ಚ75 ಯುನಿಟ್ ತನಕ ಉಚಿತ ವಿದ್ಯುತ್ ನೀಡಲು ರಾಜ್ಯ ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ. ಇಂದು ವಿಧಾನಸಭೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಇದೇ ವೇಳೆ ರಾಜ್ಯದ ನಗರಸಭೆ, ಪುರಸಭೆ ಮತ್ತು ಇತರೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 11,133 ಪೌರಕಾರ್ಮಿಕರನ್ನು ವಿಶೇಷ ನೇಮಕಾತಿಯಲ್ಲಿ ಸಕ್ರಮ ಮಾಡಲು ಕೂಡ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಬಿಬಿಎಂಪಿಯ 3673, ನಗರಸಭೆ ಮತ್ತು ಪುರಸಭೆಯ 5533 ಹಾಗೂ ಮಹಾನಗರ ಪಾಲಿಕೆಗಳಲ್ಲಿನ 1,927 ಗುತ್ತಿಗೆ ನೌಕರರನ್ನು ಖಾಯಂ ಮಾಡಿಕೊಳ್ಳುವುದಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿರುವುದು ಪೌರಕಾರ್ಮಿಕರನ್ನು ಖಾಯಂ ಮಾಡಿಕೊಳ್ಳುವುದಕ್ಕೆ ಮುಂದಾಗಿರುವುದು ಕಾರ್ಮಿಕರ ಮೊಗದಲ್ಲಿ ಮಂದ ಹಾಸ ಮೂಡಿದೆ.
ಸಚಿವ ಸಂಪುಟ ಸಭೆಯಲ್ಲಿ SSLC, PU ಪರೀಕ್ಷಾ ಮಂಡಳಿ ವಿಲೀನಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷಾ ಮಂಡಳಿಗಳನ್ನ ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿಯನ್ನ ಜಾರಿಗೆ ತರಲು ನಿರ್ಧರಿಸಲಾಗಿದೆ. ಅನಗತ್ಯ ಖರ್ಚು, ಹೆಚ್ಚುವರಿ ಸಿಬ್ಬಂದಿ ನೇಮಕ ಸೇರಿದಂತೆ ಹಲವು ಅನಗತ್ಯ ಖರ್ಚಿಗೆ ಬ್ರೇಕ್ ಹಾಕಲು SSLC, PU ಪರೀಕ್ಷಾ ಮಂಡಳಿ ವಿಲೀನಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿದು ಬಂದಿದೆ.