ಬೆಂಗಳೂರು : ರಾಜ್ಯದಲ್ಲಿ ಮಳೆಯಿಂದ ಉಂಟಾಗಿರುವ ಬೆಳೆಹಾನಿ, ಮನೆ ಹಾನಿ ಹಾಗೂ ಮೂಲ ಸೌಕರ್ಯಗಳ ಹಾನಿ ಸರಿಪಡಿಸಲು ಒಟ್ಟು 3,600 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಸಿಹಿ ಸುದ್ದಿ: ಮೀನು ಕೃಷಿಕರ ಮಕ್ಕಳಿಗೂ ಮುಖ್ಯಮಂತ್ರಿ ವಿದ್ಯಾಸಿರಿ ಯೋಜನೆ ವಿಸ್ತರಣೆ
ವಿಧಾನಸಭೆಯಲ್ಲಿ ಮಳೆಹಾನಿ ಕುರಿತ ಚರ್ಚೆಗೆ ಉತ್ತರ ನೀಡಿ ಮಾತನಾಡಿದ ಸಿಎಂ ಬೊಮ್ಮಾಯಿ, ಬೆಂಗಳೂರಿನಲ್ಲಿ ಮಳೆಯಿಂದಾಗಿ ಉಂಟಾಗಿರುವ ಸಮಸ್ಯೆ ಪರಿಹಾರಕ್ಕಾಗಿ ರಾಜಕಾಲುವೆ ಅಭಿವೃದ್ಧಿಗೆ 300 ಕೋಟಿ ರೂ. ರಸ್ತೆ ಅಭಿವೃದ್ಧಿಗೆ 300 ಕೋಟಿ ರೂ. ಸೇರಿ ಒಟ್ಟು 600 ಕೋಟಿ ರೂ. ಅನುದಾನ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.
BIGG NEWS: SSLC, PU ಪರೀಕ್ಷಾ ಮಂಡಳಿ ವಿಲೀನಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ
ದಾಖಲೆಯ ಮಳೆ ಉಂಟಾಗಿದ್ದರಿಂದ ರಾಜಕಾಲುವೆ ಮೇಲೆ ಒತ್ತಡ ಹೆಚ್ಚಾಗಿ ಪ್ರವಾಹ ಉಂಟಾಗಿದೆ. ಅವೈಜ್ಞಾನಿಕ ಕಾಲುವೆ, ತಡೆಗೋಡೆ ಕುಸಿತ, ಅಸಮರ್ಪಕ ನಿರ್ವಹಣೆಯಿಂದ ಉಂಟಾದ ಸಮಸ್ಯೆಗಳನ್ನು ಪರಿಹರಿಸಲು 300 ಕೋಟಿ ರೂ. ಹಾಗೂ ಜೊತೆಗೆ ರಸ್ತೆಗಳ ಅಭಿವೃದ್ಧಿಗೆ 300 ಕೋಟಿ ಬಿಡುಗಡೆ ಮಾಡಲಾಗುವುದು ಎಂದರು.