ಬೆಂಗಳೂರು : ಕನ್ನಡಪರ ಹೋರಾಟಗಾರರು, ರೈತ ಮುಖಂಡರ ಮೇಲೆ ಸೇರಿದಂತೆ ದಾಖಲಾದ ಕೇಸುಗಳೂ ಸೇರಿದಂತೆ 35 ಕ್ರಿಮಿನಲ್ ಮೊಕ್ಕದ್ದಮೆಗಳನ್ನು ವಾಪಸ್ ಪಡೆಯಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ.
ಮದುವೆ ಕೇವಲ ಲೈಂಗಿಕ ಸುಖಕ್ಕಾಗಿ ಅಲ್ಲ, ಅದರ ಮುಖ್ಯ ಉದ್ದೇಶ ಸಂತಾನೋತ್ಪತ್ತಿ: ಹೈಕೋರ್ಟ್
ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಕೇಸು ವಾಪಸ್ಸು ತೆಗೆದುಕೊಳ್ಳುವುದಕ್ಕೆ ಸಂಬಂಧಪಟ್ಟಂತೆ ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಲಾಗಿತ್ತು, ಸಮಿತಿ ನೀಡಿದ ವರದಿ ಆಧಾರದ ಮೇಲೆ ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.
BIGG NEWS : ರಾಜ್ಯ ಸರ್ಕಾರದಿಂದ ಪ್ರವಾಹ ಪರಿಹಾರಕ್ಕೆ 3,600 ಕೋಟಿ ರೂ. ನೆರವು : ಸಿಎಂ ಬೊಮ್ಮಾಯಿ ಘೋಷಣೆ
ಸಚಿವ ಸಂಪುಟ ಸಭೆಯಲ್ಲಿ SSLC, PU ಪರೀಕ್ಷಾ ಮಂಡಳಿ ವಿಲೀನಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷಾ ಮಂಡಳಿಗಳನ್ನ ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿಯನ್ನ ಜಾರಿಗೆ ತರಲು ನಿರ್ಧರಿಸಲಾಗಿದೆ. ಅನಗತ್ಯ ಖರ್ಚು, ಹೆಚ್ಚುವರಿ ಸಿಬ್ಬಂದಿ ನೇಮಕ ಸೇರಿದಂತೆ ಹಲವು ಅನಗತ್ಯ ಖರ್ಚಿಗೆ ಬ್ರೇಕ್ ಹಾಕಲು SSLC, PU ಪರೀಕ್ಷಾ ಮಂಡಳಿ ವಿಲೀನಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿದು ಬಂದಿದೆ.