ಬೆಂಗಳೂರು : ದೈಹಿಕ ಶಿಕ್ಷಣ ಶಿಕ್ಷಕ ಹುದ್ದೆಯ ಉದ್ಯೋಗಾಂಕ್ಷಿಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಗುಡ್ ನ್ಯೂಸ್ ನೀಡಿದ್ದು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಬಾಕಿ ಇರುವ 1120 ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
BREAKING NEWS : ಕಲಬುರಗಿಯಲ್ಲಿ ಕಲುಷಿತ ನೀರು ಸೇವಿಸಿ 15 ಕ್ಕೂ ಹೆಚ್ಚು ಜನರು ಅಸ್ವಸ್ಥ : ಆಸ್ಪತ್ರೆಗೆ ದಾಖಲು
ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಪ್ರಸ್ತುತ ಪ್ರೌಢಶಾಲೆಗಳಿಗೆ 200 ದೈಹಿಕ ಶಿಕ್ಷಕರನ್ನು ನೇಮಿಸಲು ಆರ್ಥಿಕ ಇಲಾಖೆ ಅನುಮತಿ ನೀಡಿದ್ದು, ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದರು.
ಉಳಿದಂತೆ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಾಲೆಗಳಲ್ಲಿ ದೈಹಿಕ ಶಿಕ್ಷಣದಡಿ ಹತ್ತು ಸಾವಿರಕ್ಕೂ ಹೆಚ್ಚು ಶಿಕ್ಷಕರು ಮತ್ತು ಚಿತ್ರಕಲೆಯಲ್ಲಿ 2800ಕ್ಕೂ ಹೆಚ್ಚು ಶಿಕ್ಷಕರೂ ಕೆಲಸ ನಿರ್ವಹಿಸುತ್ತಿದ್ದಾರೆ. ಖಾಲಿ ಇರುವ ದೈಹಿಕ ಶಿಕ್ಷಕರ ನೇಮಕಾತಿಗೆ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಖಾಸಗಿ ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿ 2015ರವರೆಗೆ ಖಾಲಿ ಉಳಿದಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಹಣಕಾಸು ಇಲಾಖೆಯ ಅನುಮತಿ ಪಡೆದು ಪ್ರಕ್ರಿಯೆ ಆರಂಭಿಸಲಾಗಿತ್ತು. ಖಾಸಗಿ ಶಿಕ್ಷಣ ಸಂಸ್ಥೆಗಳು 455 ಹುದ್ದೆಗಳಿಗೆ ಪ್ರಸ್ತಾವನೆಯನ್ನೇ ಕಳುಹಿಸಲಿಲ್ಲ. 171 ಹುದ್ದೆಗಳ ಪ್ರಸ್ತಾವನೆಯಲ್ಲಿ ಸರಿಯಾದ ದಾಖಲೆಗಳಿಲ್ಲದೆ ನೆನೆಗುದಿಗೆ ಬಿದ್ದಿವೆ ಎಂದು ಹೇಳಿದರು.