ದೆಹಲಿ: ಇಂದು ಬೆಳಗ್ಗೆ ನೋಯ್ಡಾದಲ್ಲಿ ವಸತಿ ಸೊಸೈಟಿಯೊಂದರ ಕಟ್ಟಡದ ಗೋಡೆ ಕುಸಿದ ಪರಿಣಾಮ ನಾಲ್ವರು ಕಟ್ಟಡ ಕಾರ್ಮಿಕರು ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ನೊಯ್ಡಾದ ಸೆಕ್ಟರ್ 21 ರಲ್ಲಿರುವ ದೊಡ್ಡ ವಸತಿ ಸಂಕೀರ್ಣವಾದ ಜಲ ವಾಯು ವಿಹಾರ್ ಬಳಿ ಒಳಚರಂಡಿ ದುರಸ್ತಿ ಕಾಮಗಾರಿಗೋಸ್ಕರ ನೋಯ್ಡಾ ಪ್ರಾಧಿಕಾರ ಗುತ್ತಿಗೆ ನೀಡಿತ್ತು. ಕಾರ್ಮಿಕರು ಇಟ್ಟಿಗೆ ಹೊರತೆಗೆಯುತ್ತಿದ್ದ ವೇಳೆ ದಿಢೀರ್ ಆಗಿ ಗೋಡೆ ಕುಸಿದ ಪರಿಣಾಮ ಈ ದುರ್ಘಟನೆ ನಡೆದಿದೆ. ಅವಶೇಷಗಳಡಿಯಲ್ಲಿ ಸಿಲುಕಿದ್ದ 12 ಕಾರ್ಮಿಕರನ್ನು ಹೊರತೆಗೆಯಲಾಗಿದೆ.
ರಕ್ಷಣಾ ಮತ್ತು ಪರಿಹಾರ ಕ್ರಮಗಳನ್ನು ಆರಂಭಿಸಲಾಗಿದೆ. ಹಿರಿಯ ಅಧಿಕಾರಿಗಳು ಸೇರಿದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
Uttar Pradesh | Boundary wall of Jal Vayu Vihar society in Noida Sector 21 collapsed this morning. A few people feared trapped. Police and Fire Department teams are present at the spot. Details awaited. pic.twitter.com/ZX4YyTUaAY
— ANI UP/Uttarakhand (@ANINewsUP) September 20, 2022
ಘಟನೆ ಬಗ್ಗೆ ತಿಳಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಇನ್ನೂ, ಹಿರಿಯ ಅಧಿಕಾರಿಗಳನ್ನು ತಕ್ಷಣವೇ ಸ್ಥಳಕ್ಕೆ ತಲುಪಿ ಪರಿಹಾರ ಕಾರ್ಯವನ್ನು ಪ್ರಾರಂಭಿಸುವಂತೆ ಸೂಚಿಸಿದ್ದು, ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಅವರ ಕಚೇರಿ ಟ್ವೀಟ್ ಮಾಡಿದೆ.
#UPCM @myogiadityanath ने जनपद गौतमबुद्धनगर में दीवार गिरने से हुई जनहानि पर गहरा शोक व्यक्त किया है।
मुख्यमंत्री जी ने वरिष्ठ अधिकारियों को मौके पर तत्काल पहुंचकर युद्धस्तर पर राहत कार्य संचालित करने के निर्देश दिए हैं।
— CM Office, GoUP (@CMOfficeUP) September 20, 2022
BIG NEWS: ಗಾಳಿಯಲ್ಲಿರುವ ವೈರಸ್ಗಳನ್ನು ಕೇವಲ 10 ನಿಮಿಷಗಳಲ್ಲಿ ಪತ್ತೆ ಮಾಡುತ್ತೆ ಈ ಮಾಸ್ಕ್!
BIGG NEWS : ಮಕ್ಕಳ ಕಳ್ಳರ ಬಗ್ಗೆ ವದಂತಿ ಹಬ್ಬಿಸಿದರೆ ಕಠಿಣ ಕ್ರಮ : ಉಡುಪಿ ಎಸ್ ಪಿ ಅಕ್ಷಯ್ ಮಚ್ಚಿಂದ್ರ ಎಚ್ಚರಿಕೆ