ಮಂಗಳೂರು : ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ ಬೆನ್ನಲ್ಲೇ ಮಂಗಳೂರಿನಲ್ಲಿ ಮತ್ತೊಬ್ಬ ಶಂಕಿತ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನಲ್ಲಿ ಅನ್ಸರ್ ಎಂಬ ಶಂಕಿತ ಉಗ್ರನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದು, ಅಜ್ಞಾತ ಸ್ಥಳದಲ್ಲಿಟ್ಟುಕೊಂಡು ಆತನನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ
ಶಿವಮೊಗ್ಗದಲ್ಲಿ ಶಂಕಿತ ಉಗ್ರ ಯಾಸಿನ್ ಹಾಗೂ ಮಾಜ್ ಎನ್ನುವವನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.ಈ ಕುರಿತು ಮಾಹಿತಿ ನೀಡಿರುವ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀ ಪ್ರಸಾದ್ ‘ ಶಂಕಿತ ಉಗ್ರರನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಿದ್ದೇವೆ, ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ಹೊರಬೀಳಲಿದೆ ಎಂದು ಮಾಹಿತಿ ನೀಡಿದ್ದಾರೆ.
ಸದ್ಯ, ಒಟ್ಟು ಮೂವರ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ. ಶಿವಮೊಗ್ಗ ದಲ್ಲಿ ಕೂತು ರಾಜ್ಯದ ಹಲವೆಡೆ ಬಾಂಬ್ ಬ್ಲಾಸ್ಟ್ ಹಾಗೂ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದು, ಐಸಿಎಸ್ ಉಗ್ರರ ಜತೆಗೆ ಮಂಗಳೂರು-ಶಿವಮೊಗ್ಗ ಲಿಂಕ್ ಕೂಡ ಹೊಂದಿದ ಒಟ್ಟು ಮೂವರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.
ರಾಜ್ಯದ ಹಲವು ಕಡೆ ಬಾಂಬ್ ಬ್ಲಾಸ್ಟ್ ಮಾಡೋದಕ್ಕೆ ಪ್ಲ್ಯಾನ್ ಮಾಡ್ತಿದ್ದರು. ಮೂವರು ಶಂಕಿತ ಎ1 ಆರೋಪಿ ತೀರ್ಥಹಳ್ಳಿಯ ಸೊಪ್ಪುಗುಡ್ಡೆಯ ಶಾರಿಖ್, ಎ-2 ಮಂಗಳೂರು ಮೂಲದ ಮಾಸ್, ಎಲೆಕ್ಟ್ರಿಕ್ ಇಂಜಿನಿಯರ್ ಆಗಿದ್ದ, ಜತೆಗೆ ಶಿವಮೊಗ್ಗ ಸಿದ್ದೇಶ್ವರ ನಗರದ ಎ-3 ಆರೋಪಿ ಯಾಸಿನ್ ಎಂದು ಗುರುತಿಸಲಾಗಿದೆ.
ಯಾಸಿನ್ ಐಸಿಎಸ್ ಉಗ್ರ ನೇರ ಸಂಪರ್ಕ ಹೊಂದಿದ್ದಾನೆ ಎಂದು ತಿಳಿದುಬಂದಿದೆ. ತೀರ್ಥಹಳ್ಳಿಯ ಶರೀಖ್ ಎಂಬ ಶಂಕಿತ ಉಗ್ರನಿಗಾಗಿ ಪೊಲೀಸರಿಂದ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಶಿವಮೊಗ್ಗಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಎಪಿಎಂಸಿ ಕಾಯ್ದೆ ರದ್ದು ಮಾಡೋದಿಲ್ಲ : ಸಚಿವ ಎಸ್.ಟಿ ಸೋಮಶೇಖರ್