ಮಂಗಳೂರು : ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ ಬೆನ್ನಲ್ಲೇ ಮಂಗಳೂರಿನಲ್ಲಿ ಮತ್ತೊಬ್ಬ ಶಂಕಿತ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ.
ಇದೀಗ ಮೂವರು ಶಂಕಿತ ಉಗ್ರರನ್ನು 9 ದಿನ ಪೊಲೀಸ್ ಕಸ್ಟಡಿಗೆ ನೀಡಿ ಶಿವಮೊಗ್ಗ ಕೋರ್ಟ್ ಆದೇಶ ಹೊರಡಿಸಿದೆ. ಶಿವಮೊಗ್ಗದ ಮೂರನೇ ಜೆಎಂಎಫ್ ಸಿ ನ್ಯಾಯಾಲಯ ಮೂವರು ಶಂಕಿತ ಉಗ್ರರನ್ನು 9 ದಿನಗಳ ಕಾಲ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.
ಮಂಗಳೂರಿನಲ್ಲಿ ಅನ್ಸರ್ ಎಂಬ ಶಂಕಿತ ಉಗ್ರನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದು, ಅಜ್ಞಾತ ಸ್ಥಳದಲ್ಲಿಟ್ಟುಕೊಂಡು ಆತನನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶಿವಮೊಗ್ಗದಲ್ಲಿ ಶಂಕಿತ ಉಗ್ರ ಯಾಸಿನ್ ಹಾಗೂ ಮಾಜ್ ಎನ್ನುವವನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ
. ಶಂಕಿತರು ರಾಜ್ಯದ ಹಲವು ಕಡೆ ಬಾಂಬ್ ಬ್ಲಾಸ್ಟ್ ಮಾಡೋದಕ್ಕೆ ಪ್ಲ್ಯಾನ್ ಮಾಡ್ತಿದ್ದರು. ಮೂವರು ಶಂಕಿತ ಎ1 ಆರೋಪಿ ತೀರ್ಥಹಳ್ಳಿಯ ಸೊಪ್ಪುಗುಡ್ಡೆಯ ಶಾರಿಖ್, ಎ-2 ಮಂಗಳೂರು ಮೂಲದ ಮಾಸ್, ಎಲೆಕ್ಟ್ರಿಕ್ ಇಂಜಿನಿಯರ್ ಆಗಿದ್ದ, ಜತೆಗೆ ಶಿವಮೊಗ್ಗ ಸಿದ್ದೇಶ್ವರ ನಗರದ ಎ-3 ಆರೋಪಿ ಯಾಸಿನ್ ಎಂದು ಗುರುತಿಸಲಾಗಿದೆ.
ಯಾಸಿನ್ ಐಸಿಎಸ್ ಉಗ್ರ ನೇರ ಸಂಪರ್ಕ ಹೊಂದಿದ್ದಾನೆ ಎಂದು ತಿಳಿದುಬಂದಿದೆ. ತೀರ್ಥಹಳ್ಳಿಯ ಶರೀಖ್ ಎಂಬ ಶಂಕಿತ ಉಗ್ರನಿಗಾಗಿ ಪೊಲೀಸರಿಂದ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಶಿವಮೊಗ್ಗಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
BIGG BREAKING NEWS : ಮಂಗಳೂರಿನಲ್ಲಿ ಮತ್ತೋರ್ವ ಶಂಕಿತ ‘ಉಗ್ರ’ ಅರೆಸ್ಟ್ ; ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆ