ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯವು ಖಾಲಿ ಇರುವ 2022-23 ನೇ ಶೈಕ್ಷಣಿಕ ವರ್ಷಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸ ಬಯಸುವ ಆಸಕ್ತ ಅರ್ಹ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಸಂಬಂಧಿಸಿದ ದಾಖಲೆಗಳನ್ನು ಸೆ.26 ರಂದು ಅಥವಾ ಅದಕ್ಕೂ ಮೊದಲು ಆಯಾ ಇಲಾಖೆಯ ಮುಖ್ಯಸ್ಥರಿಗೆ ನೀಡಬೇಕು ಎಂದು ವಿವಿ ಪ್ರಕಟಣೆ ತಿಳಿಸಿದೆ.
ಬೆಂಗಳೂರು ವಿವಿಯ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ ಹೊರಡಿಸಿದ ಪ್ರಕಟಣೆಯಲ್ಲಿ ಆರ್ಕಿಟೆಕ್ಟರ್ , ಮೆಕ್ಯಾನಿಕಲ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಮತ್ತು ಮಾಹಿತಿ ವಿಜ್ಞಾನ ಎಂಜಿನಿಯರಿಂಗ್, ಸಿವಿಲ್ ಎಂಜಿನಿಯರಿಂಗ್ ಮತ್ತು ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಬೋಧನೆ ಮಾಡಲು ಪೂರ್ಣ ಸಮಯದವರೆಗೆ ಹಾಗೂ ಅರೆಕಾಲಿಕಅತಿಥಿ ಉಪನ್ಯಾಸಕರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ವಿವಿ ಅಧಿಕೃತ ವೆಬ್ ಸೈಟ್ ತಾಣ ವೀಕ್ಷಿಸಬಹುದು. ಅರ್ಜಿ ಸಲ್ಲಿಸಲು ಬಯಸುವವವರು ಆಯಾ ವಿಭಾಗದಲ್ಲಿ ಸ್ನಾತಕೋತ್ತರ ವಿಭಾಗ ಪೂರೈಸಿರಬೇಕು.
ಕುತೂಹಲ ಮೂಡಿಸಿದ ಜೆಡಿಎಸ್ ವರಿಷ್ಟ ಹೆಚ್.ಡಿ ದೇವೇಗೌಡ -B.S ಯಡಿಯೂರಪ್ಪ ಭೇಟಿ
EPFO: ನಿಮ್ಮ ಪಿಎಫ್ ಬ್ಯಾಲೆನ್ಸ್ ಅನ್ನು ಪರಿಶೀಲಿಸುವುದು ಹೇಗೆ ? ಮಾಹಿತಿ ಇಲ್ಲಿದೆ