ಮಂಗಳೂರು : ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ ಬೆನ್ನಲ್ಲೇ ಮಂಗಳೂರಿನಲ್ಲಿ ಮತ್ತೊಬ್ಬ ಶಂಕಿತ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ.ಇದೀಗ ಮೂವರು ಶಂಕಿತ ಉಗ್ರರನ್ನು 9 ದಿನ ಪೊಲೀಸ್ ಕಸ್ಟಡಿಗೆ ನೀಡಿ ಶಿವಮೊಗ್ಗ ಕೋರ್ಟ್ ಆದೇಶ ಹೊರಡಿಸಿದೆ.
ತೀರ್ಥಹಳ್ಳಿಯ ಭೂಗತ ಶಂಕಿತರ ಉಗ್ರ ಮತೀನ್ ತಲೆಮರೆಸಿಕೊಂಡು ಎರಡು ವರ್ಷಗಳು ಕಳೆದಿವೆ. ಈತನ ಸುಳಿವು ಸಿಕ್ಕಿಲ್ಲ., ಸದ್ಯ ಈ ವ್ಯಕ್ತಿಯ ಬಂಧನಕ್ಕೆ ಎನ್ಐ ಮುಂದಾಗಿದೆ. ಇದೀಗ ಈತನ ಕುರಿತು ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಘೋಷಣೆ ಮಾಡಲಾಗಿದೆ. ಮತೀನ್ ತಮಿಳುನಾಡಿನ ಹಿಂದೂ ಕಾರ್ಯಕರ್ತನ ಹತ್ಯೆಯ ಪ್ರಮುಖ ಆರೋಪಿಯಾಗಿದ್ದಾನೆ.
ಶಿವಮೊಗ್ಗದ ಮೂರನೇ ಜೆಎಂಎಫ್ ಸಿ ನ್ಯಾಯಾಲಯ ಮೂವರು ಶಂಕಿತ ಉಗ್ರರನ್ನು 9 ದಿನಗಳ ಕಾಲ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.
. ಶಂಕಿತರು ರಾಜ್ಯದ ಹಲವು ಕಡೆ ಬಾಂಬ್ ಬ್ಲಾಸ್ಟ್ ಮಾಡೋದಕ್ಕೆ ಪ್ಲ್ಯಾನ್ ಮಾಡ್ತಿದ್ದರು. ಮೂವರು ಶಂಕಿತ ಎ1 ಆರೋಪಿ ತೀರ್ಥಹಳ್ಳಿಯ ಸೊಪ್ಪುಗುಡ್ಡೆಯ ಶಾರಿಖ್, ಎ-2 ಮಂಗಳೂರು ಮೂಲದ ಮಾಸ್, ಎಲೆಕ್ಟ್ರಿಕ್ ಇಂಜಿನಿಯರ್ ಆಗಿದ್ದ, ಜತೆಗೆ ಶಿವಮೊಗ್ಗ ಸಿದ್ದೇಶ್ವರ ನಗರದ ಎ-3 ಆರೋಪಿ ಯಾಸಿನ್ ಎಂದು ಗುರುತಿಸಲಾಗಿದೆ.