ಬೆಂಗಳೂರು : ಉಚಿತ ಬಸ್ ಪಾಸ್ ಸೇರಿದಂತೆ ಕಾರ್ಮಿಕ ಇಲಾಖೆಯ ಹಲವು ಕಾರ್ಯಕ್ರಮಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.
ವಿಧಾನಸೌಧದ ಬ್ವಾಂಕ್ವೆಟ್ ಹಾಲ್ನಲ್ಲಿ ನಡೆದ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಸೌಲಭ್ಯ, ಕಟ್ಟಡ ಕಾರ್ಮಿಕ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಯೋಜನೆ ಉದ್ಘಾಟನೆ ಸಮಾರಂಭಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ ನೀಡಿ ನಂತರ ಮಾತನಾಡಿದರು.
ರೈತ, ಕಾರ್ಮಿಕ, ಸೈನಿಕ ಈ ದೇಶದ ಬೆನ್ನೆಲುಬಾಗಿದ್ದಾ ರೆ. ಅವರು ಆರ್ಥಿಕವಾಗಿ ಸಧೃಡರಾಗಿರಬೇಕು. ಕಾರ್ಮಿಕರ ಪ್ರಯಾಣ ಉಚಿತವಾಗಿ ಆದರೆ, ಅವರ ಜೇಬಿನ ಹೊರೆ ಕಡಿಮೆಯಾಗುತ್ತದೆ. ಸದ್ಯ 70 ಸಾವಿರ ಕಾರ್ಮಿಕರಿಗೆ ಬಸ್ ಪಾಸ್ ಕೊಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಎಲ್ಲಾ ಕಾರ್ಮಿಕರಿಗೂ ಕೊಡುತ್ತೇವೆ. ಕಾರ್ಮಿಕ ಇಲಾಖೆಯ ವೆಬ್ಸೈಟ್ ಅವರ ಅಭಿವೃದ್ಧಿಗೆ ಮತ್ತಷ್ಟು ಸಹಕಾರಿಯಾಗಲಿದೆ ಎಂದರು.
ವಿಧಾನಸೌಧದ ಬ್ವಾಂಕ್ವೆಟ್ ಹಾಲ್ನಲ್ಲಿ ನಡೆದ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಸೌಲಭ್ಯ, ಕಟ್ಟಡ ಕಾರ್ಮಿಕ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಯೋಜನೆ ಉದ್ಘಾಟನೆ ಸಮಾರಂಭಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ ನೀಡಿದರು. ಈ ವೇಳೆ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಗುಜರಾತ್ ನಲ್ಲಿ ಅರವಿಂದ ಕೇಜ್ರಿವಾಲ್ಗೆ ‘ಮೋದಿ, ಮೋದಿ’ ಅಂತ ಕೂಗಿ ಸ್ವಾಗತ: ಇಲ್ಲಿದೆ ವಿಡಿಯೋ