ಬೆಂಗಳೂರು : ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ವತಿಯಿಂದ 2022-23ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿದ್ಯಾಸಿರಿ ಯೋಜನೆಯಡಿ ಸೇವಾಸಿಂಧು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
BIGG NEWS : ಸೆ. 24 ರಂದು `ಮಹಿಷ ದಸರಾ’ ಆಚರಣೆ : ಮಾಜಿ ಮೇಯರ್ ಪುರುಷೋತ್ತಮ್
ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆ”ಯಡಿ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಸರ್ಕಾರಿ/ ಖಾಸಗಿ ಅನುದಾನಿತ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಸಿಗದೇ ಇರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ಅನುಕೂಲವಾಗುವಂತೆ ಊಟ ಮತ್ತು ವಸತಿ ಸೌಲಭ್ಯಕ್ಕೆ ಸಹಾಯ ಒದಗಿಸಲು, ಪ್ರತಿ ತಿಂಗಳಿಗೆ 1,500/-ರಂತೆ ಶೈಕ್ಷಣಿಕ ಅವಧಿಯಲ್ಲಿ 10 ತಿಂಗಳಿಗೆ ರೂ.15000/-ಗಳನ್ನು (ಗರಿಷ್ಠ) ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಆನ್ಲೈನ್ ಮುಖಾಂತರ ಜಮಾ ಮಾಡಲಾಗುತ್ತದೆ.
ʻಸಾಫ್ಟ್ವೇರ್ ಇಂಜಿನಿರ್ಗಳು ದಯವಿಟ್ಟು ನನಗೆ ಕರೆ ಮಾಡಬೇಡಿʼ!: ಯುವತಿಯ ಮ್ಯಾಟ್ರಿಮೋನಿಯಲ್ ಜಾಹೀರಾತು ವೈರಲ್
ಆಸಕ್ತ ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳಲು ಅರ್ಜಿಗಳನ್ನು ಅಕ್ಟೋಬರ್ 20 ರವರೆಗೆ ಸೇವಾಸಿಂಧು ಆನ್ಲೈನ್ ಮೂಲಕ https://sevasindu.Karnataka.gov.in ನಲ್ಲಿ ಅರ್ಜಿಗಳನ್ನು ಸಲ್ಲಿಸಿ, ಸಲ್ಲಿಸಿದ ಹಾರ್ಡ್ಕಾಫಿಯನ್ನು ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ:216, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋ||, ದೇವನಹಳ್ಳಿ ತಾ||-562110 ರವರಿಗೆ ಸಲ್ಲಿಸುವುದು.
ಅಲ್ಪಸಂಖ್ಯಾತರ ಸಮುದಾಯದ “ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯದಲ್ಲಿ ಪ್ರವೇಶ, ”ವಿದ್ಯಾಸಿರಿ”- ಊಟ ಮತ್ತು ವಸತಿ ಸಹಾಯ ಯೋಜನೆ ಇವುಗಳಲ್ಲಿ ಯಾವುದಾದರೂ ಒಂದು ಸೌಲಭ್ಯಕ್ಕೆ ಮಾತ್ರ ಅರ್ಹರಿರುತ್ತಾರೆ.
ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿ ಯಾಗಿರಬೇಕು, ಭಾರತ ಸರ್ಕಾರದ ಅಥವಾ ರಾಜ್ಯ ಸರ್ಕಾರ ಅಧಿಸೂಚಿಸಿರುವ, ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ಸಮುದಾಯಕ್ಕೆ ಸೇರಿರಬೇಕು,ಕರ್ನಾಟಕ ಶಾಸನಬದ್ದ ವಿಶ್ವವಿದ್ಯಾಲಯಗಳ ಅಧೀನಕ್ಕೆ ಒಳಪಡುವ ಸರ್ಕಾರಿ/ಸ್ಥಳೀಯ ಸಂಸ್ಥೆ/ಅನುದಾನಿತ ಸಂಸ್ಥೆಗಳು/ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಸಂಸ್ಥೆಗಳಲ್ಲಿ-ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿರಬೇಕು, ವಿದ್ಯಾಸಿರಿ ಸೌಲಭ್ಯ ಪಡೆಯಲು ವಿದ್ಯಾರ್ಥಿಯ, ತಂದೆ-ತಾಯಿ/ಪೋಷಕರ ಕುಂಟುಂಬದ, ಒಟ್ಟು ವಾರ್ಷಿಕ ಪ್ರವರ್ಗ-1 ಕ್ಕೆ ರೂ.2,50ಲಕ್ಷ ಮತ್ತು 2ಎ, 2ಬಿ ಮತ್ತು 3ಬಿ ಕ್ಕೆ ರೂ.2.00 ಲಕ್ಷ ಮೀರಿರಬಾರದು,
ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿರಬೇಕು ಹಾಗೂ ಯೋಜನೆಯಡಿ ಪ್ರಥಮ ಬಾರಿಗೆ ಸೌಲಭ್ಯವನ್ನು ಪಡೆಯಲು, ಈ ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆ/ಸೆಮಿಸ್ಟಿರ್ ತರಗತಿಯಲ್ಲ್ಲಿ ಉತ್ತೀರ್ಣರಾಗಿರಬೇಕು.
ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕಾಲೇಜು/ಸಂಸ್ಥೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿರಬೇಕು,ಮುಕ್ತ ವಿಶ್ವವಿದ್ಯಾಲಯ/ದೂರ ಶಿಕ್ಷಣ(correspondence course ) ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಈ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ / ಅಲ್ಪಸಂಖ್ಯಾತರ ತಾಲ್ಲೂಕು ವಿಸ್ತರಣಾಧಿಕಾರಿಗಳು ಮತ್ತು ಮಾಹಿತಿ ಕೆಂದ್ರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ, ನೆಲಮಂಗಲ ತಾಲ್ಲೂಕು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ:216, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋ||, ದೇವನಹಳ್ಳಿ ತಾ||-562110 ಅಥವಾ ಇಲಾಖೆ ಸಹಾಯವಾಣಿ ಸಂಖ್ಯೆ:8277799990 ಮತ್ತು ಕಛೇರಿಯ ದೂರವಾಣಿ ಸಂಖ್ಯೆ: 080-29787455, 080-27627444, 080-27725445, 080-27682882, 080-27931899 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಕವಿತಾ.ಇ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.