ಕೊಪ್ಪಳ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ (ನಿ) ಕೊಪ್ಪಳ ಕಚೇರಿ ವತಿಯಿಂದ 2022-23ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
BIGG NEWS : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾಸಿರಿ ಯೋಜನೆ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಒದಗಿಸಲಾಗುತ್ತಿದ್ದು, ಜಿಲ್ಲೆಯ ಅರ್ಹ ರೈತ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಜಾತಿ, ಸಮುದಾಯದ ಸಣ್ಣ ಮತ್ತು ಅತಿ ಸಣ್ಣ ರೈತರಾಗಿದ್ದು, ಹಾಲಿ ಜಮೀನುಗಳು ಕೃಷಿ ಚಟುವಟಿಕೆಯಲ್ಲಿರಬೇಕು. ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು. ಫಲಾನುಭವಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ವಯಸ್ಸು 18 ರಿಂದ 60 ವರ್ಷದೊಳಗಿರಬೇಕು. ಕುಟುಂಬ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98 ಸಾವಿರ ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 1.20 ಲಕ್ಷಗಳು ಒಳಗಿರಬೇಕು. ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 02 ಎಕರೆ ಜಮೀನು ಹೊಂದಿರಬೇಕು. ವೈಯಕ್ತಿಕ ಕೊಳವೆ ಬಾವಿ ಯೋಜನೆಯಲ್ಲಿ ಘಟಕ ವೆಚ್ಚ ರೂ. 2.50 ಲಕ್ಷಗಳು, ಇದರಲ್ಲಿ ರೂ. 2.00 ಲಕ್ಷ ಸಹಾಯಧನ ಹಾಗೂ ರೂ.50 ಸಾವಿರ ನಿಗಮದಿಂದ ಶೇ. 4ರ ಬಡ್ಡಿದರದಲ್ಲಿ ನೀಡುವ ಸಾಲದ ಮೊತ್ತ ಒಳಗೊಂಡಿದೆ.
ರೈತರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆ ರೈತರ ಹೆಸರು (ಶ್ರೀ, ಶ್ರೀಮತಿ, ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಬ್ಯಾಂಕ್ ಪುಸ್ತಕದಲ್ಲಿಯೂ ಇದ್ದು, ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಆಧಾರ್ ಕಾರ್ಡ್ನಲ್ಲಿರುವಂತೆ ಹೆಸರು ಹೊಂದಾಣಿಕೆಯಾಗಿರಬೇಕು. ಈ ಹಿಂದೆ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಅರ್ಜಿದಾರರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಯನ್ನು ಅಕ್ಟೋಬರ್ 20 ರೊಳಗಾಗಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://www.dbcdc.karnataka.gov.in ನಲ್ಲಿ ಸಂಪರ್ಕಿಸಿ ಅಥವಾ ನಿಗಮದ ದೂರವಾಣಿ 080-22374832 ಹಾಗೂ ಸಹಾಯವಾಣಿ 9606066389, 8824300400 ಗೆ ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ (ನಿ) ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.