ಪಂಜಾಬ್: ಪ್ರಥಮ ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಪಂಜಾಬ್ನ ಜಲಂಧರ್ನಲ್ಲಿರುವ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯ ವಿದ್ಯಾರ್ಥಿಗಳು ಮಂಗಳವಾರ ತಡರಾತ್ರಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಕೇರಳ ಮೂಲದ 21 ವರ್ಷದ ಅಗ್ನಿ ಎಸ್ ದಿಲೀಪ್ ಬ್ಯಾಚುಲರ್ ಆಫ್ ಡಿಸೈನಿಂಗ್ ಪ್ರಥಮ ವರ್ಷದ ವಿದ್ಯಾರ್ಥಿ ಮಂಗಳವಾರ ಸಂಜೆ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Late night Students created ruckus over alleged student suicide case in #Jalandhar‘s Lovely Professional University. pic.twitter.com/uFBrFXykhE
— Nikhil Choudhary (@NikhilCh_) September 20, 2022
ಹಾಸ್ಟೆಲ್ ಕೊಠಡಿಯಿಂದ ವಶಪಡಿಸಿಕೊಂಡ ಆತ್ಮಹತ್ಯೆ ಪತ್ರದಲ್ಲಿ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Punjab | We received info at around 5:30pm on September 20 that a first-year student of B. Design at Lovely Professional University died by suicide. We reached the spot & recovered a suicide note which cited personal reasons; further investigation underway: Kapurthala Police pic.twitter.com/GKCqMpjLvV
— ANI (@ANI) September 21, 2022
“ಆತ್ಮಹತ್ಯೆ ಟಿಪ್ಪಣಿ ಸೂಚಿಸುವಂತೆ ವಿದ್ಯಾರ್ಥಿಯು ಕೆಲವು ವೈಯಕ್ತಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದ” ಎಂದು ಫಗ್ವಾರಾ ಪೊಲೀಸರು ನಂತರ ನೀಡಿದ ಸಂಕ್ಷಿಪ್ತ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿಶ್ವವಿದ್ಯಾಲಯದ ಆವರಣದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
BIGG NEWS : ವಸತಿ ರಹಿತರಿಗೆ ಗುಡ್ ನ್ಯೂಸ್ : ಒಂಟಿ ಮನೆ ಯೋಜನೆಯ ಅರ್ಜಿ ಸಲ್ಲಿಕೆ ವಿಸ್ತರಣೆ