ಬೆಂಗಳೂರು: ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಪ್ರತಿ ವರ್ಷ 2000 ಸಾವಿರ ಕೋಟಿ ರೂಗಿಂತ ಹೆಚ್ಚು ಹಣ ಖರ್ಚು ಮಾಡಲು ಅನುಮೋದನೆ ನೀಡಲಾಗಿದೆ. ಇದರಿಂದಾಗಿ ಭಾರಿ ಕಮಿಷನ್ ವ್ಯವಹಾರ ಹೆಚ್ಚಾಗುತ್ತಿದೆ. ಹೀಗಾಗಿ ಮಂಡಳಿಯನ್ನು ದಿವಾಳಿ ಅಂಚಿಗೆ ಕೊಂಡೊಯ್ಯುವ ಪ್ರಯತ್ನವನ್ನು ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ ಸಂಘ ಕಟ್ಟಡ ಕಾರ್ಮಿಕ ಮಂಡಳಿ ಎದುರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
BIGG NEWS: ಬೆಂಗಳೂರುನ Airport ನಲ್ಲಿ ಇಬ್ಬರು ಸೇನಾಧಿಕಾರಿಗಳಿಂದ ಗಲಾಟೆ; ಭದ್ರತಾ ಸಿಬ್ಬಂದಿಗೆ ಥಳಿತ
ಅನಾವಶ್ಯಕ ಯೋಜನೆಗಳನ್ನು ಜಾರಿ ಮಾಡಿರುವುದರಿಂದ ಭಾರಿ ಭ್ರಷ್ಟಾಚಾರಕ್ಕೆ ಕಾರಣವಾಗಿದೆ. ಇದೇ ಪರಿಸ್ಥಿತಿ ಮುಂದುವರೆದರೆ ಮುಂದಿನ 3-4 ವರ್ಷಗಳಲ್ಲಿ ಮಂಡಳಿ ಹಣ ಖಾಲಿಯಾಗಿ ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಇದೇ ರೀತಿ ಭಾರಿ ಪ್ರಮಾಣದಲ್ಲಿ ಹಣ ವೆಚ್ಚ ಮಾಡಿ ಈಗಾಗಲೇ ದೇಶದ ಹಲವಾರು ರಾಜ್ಯಗಳಲ್ಲಿ ಮಂಡಳಿಗಳು ಮುಚ್ಚಿ ಹೋಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ ಸಂಘ ಅಧ್ಯಕ್ಷ ಚಿಂತಾಮನಿ ಜೋ. ಕೊಡಳ್ಳಿ, ಮಂಡಳಿಯಲ್ಲಿ ವಾರ್ಷಿಕ ಕ್ಯಾಲೆಂಡ್, ಕರಪತ್ರ ಮುದ್ರಣ, ಕಳಪೆ ದರ್ಜೆ ಟೂಲ್ ಕಿಟ್ಗಳು, ಸುರಕ್ಷಾ ಕಿಟ್ ಗಳು, ಐ.ಇ.ಆ ಸ್ಕ್ರೀನ್ ಟಿ.ವಿ.ಗಳು, ತರಬೇತಿ ಶಿಬಿರಗಳು, ದುಂದು ವೆಚ್ಚದ ಯೋಜನೆಗಳಲ್ಲಿ ಭಾರಿ ಅಕ್ರಮ ನಡೆಯುತ್ತಿದೆ. ಮಂಡಳಿಯಿಂದ ಸರಕಾರದ ಇತರೆ ಅಂಗ ಸಂಸ್ಥೆಗಳಿಗೆ ನೆರವು ನೀಡಲಾಗುತ್ತಿದೆ. ಹೀಗಾಗಿ ಇಂದಿರಾ ಕ್ಯಾಟೀನ್, ಅಂಬೇಡ್ಕರ್ ಸಹಾಯ ಹಸ್ತ, ನರೇಗಾ ಕಾರ್ಮಿಕರಿಗೆ ಧನಸಹಾಯ ಮಾಡುವುದನ್ನು ಕೂಡಲೇ ನಿಲ್ಲಿಸಬೇಕು. ಮುಂಗಡವಾಗಿ ಕೋಟಿ, ಕೋಟಿ, ರೂಪಾಯಿ ಕೊಡುವುದು ತರವಲ್ಲ ಎಂದರು.
BIG BREAKING NEWS: ಹಾಸ್ಯನಟ ರಾಜು ಶ್ರೀವಾತ್ಸವ (58) ನಿಧನ | Comedian Raju Srivastava passes away
ಎಲ್ಲಾ ಕಟ್ಟಡ ಕಾರ್ಮಿಕ ಫಲಾನುಭವಿಗಳಿಗೆ ಶುಲ್ಕ ರಹಿತ ಆರೋಗ್ಯ ಕಾರ್ಡ್ ಕೊಡಬೇಕು. ಇಲ್ಲವಾದಲ್ಲಿ ಎಲ್ಲಾ ಅಸಂಘಟಿತ ಕಟ್ಟಡ ಕಾರ್ಮಿಕರನ್ನು ಇ.ಎಸ್.ಐ ಹಾಗೂ ಪಿ.ಎಫ್ ವ್ಯಾಪ್ತಿಗೆ ತರಬೇಕು. ನಿವೃತ್ತಿ ಪಿಂಚಣಿ ಪ್ರತಿ ತಿಂಗಳು ನಿಗದಿತ ದಿನಾಂಕದಂದು ದೊರೆಯುವಂತಾಬೇಕು. ಕಟ್ಟಡ ಕಾರ್ಮಿಕರಿಗಾಗಿ ಹೊಸ ಸಾಪ್ಟ್ ವೇರ್ ಸೇವೆ ಪ್ರಾರಂಭ ಮಾಡುವುದಾಗಿ 2 ವರ್ಷದಿಂದ ಹುಸಿ ಆಶ್ವಾಸನೆಗಳನ್ನು ನೀಡಲಾಗುತ್ತಿದೆ. ಫಲಾನುಭವಿ ಮಕ್ಕಳ ಶೈಕ್ಷಣಿಕ ಧನಸಹಾಯ ವ್ಯವಸ್ಥೆಯಲ್ಲೂ ಭಾರೀ ಸುಧಾರಣೆಯಾಗಬೇಕಿದೆ ಎಂದರು.
BIG BREAKING NEWS: ಹಾಸ್ಯನಟ ರಾಜು ಶ್ರೀವಾತ್ಸವ (58) ನಿಧನ | Comedian Raju Srivastava passes away
ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ .ಎಸ್. ನಾಡಿಗೇರ ಮಾತನಾಡಿ, ಬೆಂಗಳೂರಿನಲ್ಲಿ ಕೆಲಸ ಮಾಡುವ ಕಟ್ಟಡ ಕಾರ್ಮಿಕ ಫಲಾನುಭವಿಗಳಿಗೆ ಬಸ್ ಪಾಸ್ ಕೊಡುತ್ತಿದ್ದು, ಇದನ್ನು ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸಬೇಕು. “ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ” ಧೋರಣೆ ಕೈಬಿಡಬೇಕು. ಕೇಂದ್ರದಿಂದ ರಾಜ್ಯದ ಕಟ್ಟಡ ಕಾರ್ಮಿಕ ಫಲಾನುಭವಿಗಳಿಗೆ ಇದುವರೆಗೂ ಯಾವುದೇ ಸೌಲಭ್ಯ ಸಿಕ್ಕಿಲ್ಲ. ಈ ಕುರಿತು ಮಂಡಳಿ ಗಮನಹರಿಸಬೇಕು.
ಭಾರತೀಯ ಮಜ್ದೂರ್ ಸಂಘದ ರಾಜ್ಯಾಧ್ಯಕ್ಷರಾದ ಶಂಕರ್ ಸುಲೆಗಾವ, ಅಖಿಲ ಭಾರತೀಯ ಕನ್ ಸ್ಟ್ರಕ್ಷನ್ ಮಜ್ದೂರ್ ಸಂಘದ ಹಿರಿಯ ಮುಖಂಡರಾದ ಬಸವಂತ್ ಸಾಹು ಹಾಗು ಸಿ.ಟಿ.ಪಾಟಿಲ್, ಬಿ.ಎಮ್.ಎಸ್’ನ ನಿಕಟಪೂರ್ವ ರಾಜ್ಯಾಧ್ಯಕ್ಷರಾದ ವಿಶ್ವನಾಥ್ ಶೆಟ್ಟಿ, ಹಿರಿಯ ನಾಯಕರಾದ ಬಿ.ಎಸ್.ದೇಶಪಾಂಡೆ, ರಾಮಕೃಷ್ಣ ಪೂಂಜಾ, ಪುರುಷೋತ್ತಮ, ಡಿ.ವಿ. ರಾಮ ಮೂರ್ತಿ ಸೇರಿದಂತೆ ಇತತರು ಇದ್ದರು.