ಬೆಂಗಳೂರು: ಸರ್ಕಾರದ ವಿರುದ್ಧ 40% ಆರೋಪ ಅಣಕಿಸಿ PAY CM ಎಂಬ ಕಾಂಗ್ರೆಸ್ ಅಭಿಯಾನ ಶುರುಮಾಡಿದೆ. ನಗರದ ವಿವಿದೆಡೆ ಪೋಸ್ಟರ್ ಅನ್ನು ಅಂಟಿಸಲಾಗಿದೆ. ಇದಕ್ಕೆ ಬಿಜೆಪಿಯಿಂದಲೂ ಪೋಸ್ಟರ್ ವಾರ್ ಶುರುವಾಗಿದೆ.ಕಾಂಗ್ರೆಸ್ PAY CM ಅಸ್ತ್ರಕ್ಕೆ ಬಿಜೆಪಿ ಪ್ರತ್ಯಾಸ್ತ್ರ ಪ್ರಯೋಗಿಸಲು ಮುಂದಾಗಿದೆ.
BREAKING NEWS : ‘PAYCM’ ಪೋಸ್ಟರ್ ಅಂಟಿಸಿದವರ ವಿರುದ್ಧ ಕಠಿಣ ಕ್ರಮ : ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ವಿರುದ್ಧ ಬಿಜೆಪ ಪೋಸ್ಟರ್ ರೆಡಿಯಾಗಿದೆ. ಬಿಜೆಪಿ ನಾಯಕರ ಗಮನಕ್ಕೆ ತಂದು ಪೋಸ್ಟರ್ ರಿಲೀಸ್ ಗೆ ಬಿಜೆಪಿ ಪ್ಲ್ಯಾನ್ ಮಾಡಲು ನಿರ್ಧರಿಸಿದೆ. ರಿಡೂ ಸಿದ್ದರಾಮಯ್ಯ, ಇಡಿ ಡಿ.ಕೆ ಶಿವಕುಮಾರ್ ಅಂತ ಬಿಜೆಪಿ ಪೋಸ್ಟರ್ ರೆಡಿ ಮಾಡಿದೆ. ಇದರಲ್ಲಿ ಕಾಂಗ್ರೆಸ್ ಗಂಜಿ ಗಿರಾಕಿಗಳಿಂದ ದೂರವಿರಿ ಎಂದು ಅಭಿಯಾನ ಪ್ರಾರಂಭಿಸಲು ಬಿಜೆಪಿ ನಿರ್ಧಾರಿಸಿದೆ. ಸ್ಕ್ಯಾನ್ ಕೋಡ್ ಮೇಲೆ ಸಿದ್ದರಾಮಯ್ಯ, ಡಿಕೆಶಿ ಚಿತ್ರ ಹಾಕಿ, ರಾಜ್ಯ ಲೂಟಿ ಮಾಡಿದ ಈ ಭ್ರಷ್ಟ ಜೋಡಿಯನ್ನು ರಾಜ್ಯದಿಂದ ಕಿತ್ತೆಸೆಯಲು ಇದನ್ನು ಸ್ಕ್ಯಾನ್ ಮಾಡಿ ಅಂತ ಟಾಂಗ್ ನೀಡಿದೆ.
ಸಮಾಜವಾದಿ ಮುಖವಾಡ ಧರಿಸಿ ರಾಜ್ಯವನ್ನು ಲೂಟಿ ಮಾಡಿರುವ ಕಾಂಗ್ರೆಸ್ ಗಂಜಿ ಗಿರಾಕಿಗಳಿಂದ ದೂರವಿರಿ ಎಂದು ಅಭಿಯಾನ ಮಾಡಲು ಸಿದ್ಧತೆ ನಡೆಸಿದೆ. ಹಿರಿಯ ನಾಯಕರ ಗಮನಕ್ಕೆ ತಂದು ಅಭಿಯಾನ ನಡೆಸಲು ಮುಂದಾಗಿದೆ.