ಬೆಂಗಳೂರು : 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಹಗರಣದ ತನಿಖೆಗೆ ಇದೀಗ ಇಡಿ ಎಂಟ್ರಿ ಕೊಟ್ಟಿದ್ದು, ಬಂಧಿತ ಆರೋಪಿಗಳ ವಿಚಾರಣೆಗೆ ಕೋರ್ಟ್ ಅನುಮತಿ ಸಹ ಪಡೆದಿದೆ ಎನ್ನಲಾಗಿದೆ.
ರಾಜ್ಯಮಟ್ಟದ ಡೊಳ್ಳು, ವೀರಗಾಸೆ ಮತ್ತು ತಮಟೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅರ್ಜಿ ಆಹ್ವಾನ
ಪಿಎಸ್ ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳ ಹಿಂದೆ ಇಡಿಗೆ ಸಿಐಡಿ ಪತ್ರ ಬರೆದಿದ್ದು, ಆರೋಪಿಗಳ ಹಣಕಾಸು ವ್ಯವವಹಾರ ಕೋಟ್ಯಾಂತರ ರೂ. ಇದೆ. ಪಿಎಸ್ ಐ ನೇಮಕಾತಿಯಲ್ಲಿ ಭ್ರಷ್ಟಾಚಾರ ಆಗಿದೆ ಎಂದು ಇಡಿಗೆ ಸಿಐಡಿ ಪತ್ರ ಬರೆದಿತ್ತು.
ಸಿಐಡಿ ಪತ್ರದ ಮೇಲೆ ಮಾಹಿತಿ ಕಲೆ ಹಾಕಿದ್ದ ಇಡಿ ಟೀಂ ಇದೀಗ ತನಿಖೆಗೆ ಅಧಿಕೃತವಾಗಿ ಇಡಿ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದು, ಆರೋಪಿಗಳ ವಿಚಾರಣೆಗೆ ಕೋರ್ಟ್ ಅನುಮತಿ ಪಡೆದಿದೆ ಎನ್ನಲಾಗಿದೆ.
545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು 2022ರ ಜ.21ರಂದು ಅಧಿಸೂಚನೆ ಹೊರಡಿಸಲಾಗಿತ್ತು. 3 ಹಂತದಲ್ಲಿ ನೇಮಕ ಪ್ರಕ್ರಿಯೆ ನಡೆಸಲು ಆದೇಶದಲ್ಲಿ ತಿಳಿಸಲಾಗಿತ್ತು. ಒಟ್ಟು 1.20 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಿದ್ದರು. ಆದರೆ ನೇಮಕಾತಿಯಲ್ಲಿ ಅಕ್ರಮ ನಡೆದಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಈಗಾಗಲೇ ಸಿಐಡಿ 37 ಆರೋಪಿಗಳನ್ನು ಬಂಧಿಸಿದ್ದಾರೆ.
ರಾಜ್ಯಮಟ್ಟದ ಡೊಳ್ಳು, ವೀರಗಾಸೆ ಮತ್ತು ತಮಟೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅರ್ಜಿ ಆಹ್ವಾನ