ಕಲಬುರಗಿ : ವಿವಿಧ ಪಕ್ಷಗಳ ನಾಯಕರು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ.
ಜೆಡಿಎಸ್ ವರಿಷ್ಟ ಹೆಚ್ ಡಿ ದೇವೇಗೌಡರನ್ನು ವಿವಿಧ ಪಕ್ಷದ ನಾಯಕರು ಭೇಟಿಯಾಗುತ್ತಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮೊದಲು ಸಿದ್ದರಾಮಯ್ಯ, ನಂತರ ಯಡಿಯೂರಪ್ಪ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದಾರೆ. ಈ ವಿಚಾರ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ
ಈ ಕುರಿತು ನಗರದಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ದೇವೇಗೌಡರಿಗೆ ಆರೋಗ್ಯ ಸರಿಯಿರಲಿಲ್ಲ, ಈಗಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯದ ವಿಚಾರಿಸಲು ಬೇರೆ ಬೇರೆ ಪಕ್ಷಗಳ ಧುರೀಣರು, ನಾಯಕರು ಭೇಟಿ ನೀಡುತ್ತಿದ್ದಾರೆ ಎಂದು ಹೇಳಿದರು.
ಶಿವಮೊಗ್ಗ ಯುವಕರಿಗೆ ಉಗ್ರರ ನಂಟು : ಸಂಸದ ಬಿ.ವೈ ರಾಘವೇಂದ್ರ ಹೇಳಿದ್ದೇನು..?