ಬೆಂಗಳೂರು: ಸರ್ಕಾರಿ ಉದ್ಯೋಗಗಳಿಗೆ ಲಂಚ ಕೊಡುವ ಶಕ್ತಿಯಿಲ್ಲದ ಬಡ ಉದ್ಯೋಗಕಾಂಕ್ಷಿಗಳು ತಮ್ಮ ಪೋಷಕರು ಬೆಳೆದ ಅಕ್ಕಿ, ರಾಗಿ, ಜೋಳ ಮುಂತಾದ ಬೆಳೆಗಳ ಗಂಟನ್ನು ನನ್ನ ಕೈಗಿತ್ತು ಸರ್ಕಾರಕ್ಕೆ ತಲುಪಿಸಿ, ಉದ್ಯೋಗ ಕೊಡಿಸಿ ಎಂದು ಕೋರಿದ್ದಾರೆ. ಯುವ ಜನರ ಆಕ್ರೋಶದ ಅಲೆಗೆ ಭ್ರಷ್ಟ ಬಿಜೆಪಿ ಸರ್ಕಾರ ಕೊಚ್ಚಿ ಹೋಗುವ ದಿನ ದೂರವಿಲ್ಲ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.
ಸರ್ಕಾರಿ ಉದ್ಯೋಗಗಳಿಗೆ ಲಂಚ ಕೊಡುವ ಶಕ್ತಿಯಿಲ್ಲದ ಬಡ ಉದ್ಯೋಗಕಾಂಕ್ಷಿಗಳು ತಮ್ಮ ಪೋಷಕರು ಬೆಳೆದ ಅಕ್ಕಿ, ರಾಗಿ, ಜೋಳ ಮುಂತಾದ ಬೆಳೆಗಳ ಗಂಟನ್ನು ನನ್ನ ಕೈಗಿತ್ತು ಸರ್ಕಾರಕ್ಕೆ ತಲುಪಿಸಿ, ಉದ್ಯೋಗ ಕೊಡಿಸಿ ಎಂದು ಕೋರಿದ್ದಾರೆ.
ಯುವ ಜನರ ಆಕ್ರೋಶದ ಅಲೆಗೆ ಭ್ರಷ್ಟ @BJP4Karnataka ಸರ್ಕಾರ ಕೊಚ್ಚಿ ಹೋಗುವ ದಿನ ದೂರವಿಲ್ಲ. pic.twitter.com/MI1j6mqqmQ— Siddaramaiah (@siddaramaiah) September 20, 2022
ಈ ಬಗ್ಗೆ ಸರಣಿ ಟ್ವಿಟ್ ಮಾಡಿರುವಂತ ಅವರು,ಇಂದುಪಿಎಸ್ಐ ನೇಮಕಾತಿ ಹಗರಣದ ಸೂತ್ರಧಾರಿ ದಿವ್ಯಾ ಹಾಗರಗಿ ಅವರಿಗೆ ಪಕ್ಷದಲ್ಲಿ ಪ್ರಮುಖ ಸ್ಥಾನ ನೀಡಿದ್ದು ಯಾರು? ಅವರ ಶಿಕ್ಷಣ ಸಂಸ್ಥೆಯಲ್ಲಿ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಶಿಫಾರಸು ಮಾಡಿದವರು ಯಾರು? ಅವರ ಜೊತೆ ಹಗರಣದಲ್ಲಿ ಷಾಮೀಲಾಗಿದ್ದವರು ಯಾರು ಎಂದು ಪ್ರಶ್ನಿಸಿದ್ದಾರೆ.
ಪಿಎಸ್ಐ ನೇಮಕಾತಿ ಹಗರಣದ ಸೂತ್ರಧಾರಿ ದಿವ್ಯಾ ಹಾಗರಗಿ ಅವರಿಗೆ ಪಕ್ಷದಲ್ಲಿ ಪ್ರಮುಖ ಸ್ಥಾನ ನೀಡಿದ್ದು ಯಾರು? ಅವರ ಶಿಕ್ಷಣ ಸಂಸ್ಥೆಯಲ್ಲಿ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಶಿಫಾರಸು ಮಾಡಿದವರು ಯಾರು? ಅವರ ಜೊತೆ ಹಗರಣದಲ್ಲಿ ಷಾಮೀಲಾಗಿದ್ದವರು ಯಾರು @BJP4Karnataka? 9/15#ಅಧಿವೇಶನ
— Siddaramaiah (@siddaramaiah) September 20, 2022
ಪಿಎಸ್ಐ ನೇಮಕಾತಿ ಪರೀಕ್ಷೆಯನ್ನು ಪ್ರಾಮಾಣಿಕವಾಗಿ ಬರೆದವರು ಧರಣಿ ನಡೆಸುತ್ತಿದ್ದಾರೆ. ಅವರನ್ನು ನಾನು ಇಂದು ಭೇಟಿ ಮಾಡಿದಾಗ ನ್ಯಾಯ ಕೊಡಿಸಿ ಎಂದು ಕಣ್ಣೀರು ಹಾಕಿದರು. ಹೊಸದಾಗಿ ನೇಮಕಾತಿ ಪರೀಕ್ಷೆ ನಡೆಸಿದರೆ ನಮಗೆ ಅನ್ಯಾಯವಾಗುತ್ತದೆ ಎಂದು ಗೋಳು ತೋಡಿಕೊಂಡರು ಎಂದು ಹೇಳಿದ್ದಾರೆ.
ಪಿಎಸ್ಐ ನೇಮಕಾತಿ ಪರೀಕ್ಷೆಯನ್ನು ಪ್ರಾಮಾಣಿಕವಾಗಿ ಬರೆದವರು ಧರಣಿ ನಡೆಸುತ್ತಿದ್ದಾರೆ. ಅವರನ್ನು ನಾನು ಇಂದು ಭೇಟಿ ಮಾಡಿದಾಗ ನ್ಯಾಯ ಕೊಡಿಸಿ ಎಂದು ಕಣ್ಣೀರು ಹಾಕಿದರು. ಹೊಸದಾಗಿ ನೇಮಕಾತಿ ಪರೀಕ್ಷೆ ನಡೆಸಿದರೆ ನಮಗೆ ಅನ್ಯಾಯವಾಗುತ್ತದೆ ಎಂದು ಗೋಳು ತೋಡಿಕೊಂಡರು. 14/15#ಅಧಿವೇಶನ
— Siddaramaiah (@siddaramaiah) September 20, 2022