ಕೊಪ್ಪಳ : ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 72 ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
ಕೊಪ್ಪಳ, ಕನಕಗಿರಿ, ಯಲಬುರ್ಗಾ, ಗಂಗಾವತಿ ತಾಲೂಕುಗಳಲ್ಲಿ ಈ ಅಂಗನವಾಡಿ ಹುದ್ದೆಗಳ ಭರ್ತಿಗೆ ಮುಂದಾಗಲಾಗಿದ್ದು, ಈ ತಾಲೂಕು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಿಳಾ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. 12 ಅಂಗನವಾಡಿ ಕಾರ್ಯಕರ್ತೆ ಹಾಗೂ 60 ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆಯಾದ ಮಹಿಳೆಯರಿಗೆ 5000 ರಿಂದ 10000 ರೂ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿಡಿ ಸಡಿಲಿಕೆ ನೀಡಲಾಗಿದೆ.ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23 ಸೆಪ್ಟೆಂಬರ್ 2022 ಆಗಿದೆ,
ಆಸಕ್ತ ಅರ್ಹ ಮಹಿಳಾ ಅಭ್ಯರ್ಥಿಗಳು ಸೆ.23 ರೊಳಗಾಗಿ ಆನ್ಲೈನ್ ವೆಬ್ಸೈಟ್ www.anganwadirecruit.kar.nic.in ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಕಾಡಾನೆ ದಾಳಿಯಿಂದಾದ ಬೆಳೆ ಹಾನಿ ಪರಿಹಾರ ಹೆಚ್ಚಳ: ಸಿಎಂ ಬೊಮ್ಮಾaಯಿ ಘೋಷಣೆ
BREAKING NEWS : ಬೆಂಗಳೂರಿನ ಹಲವೆಡೆ ‘PAY CM’ ಪೋಸ್ಟರ್ ಪ್ರಕರಣ ಸಿಸಿಬಿಗೆ ವರ್ಗಾವಣೆ..!