ಬೆಂಗಳೂರು : ಬೆಂಗಳೂರು, ಮಂಗಳೂರು ಸೇರಿದಂತೆ ದೇಶದ 10 ರಾಜ್ಯಗಳಲ್ಲಿ ಎನ್ ಐಎ, ಇಡಿ ಏಕಕಾಲದಲ್ಲಿ ಪಿಎಫ್ಐ, ಎಸ್ ಡಿಪಿಐ ಕಚೇರಿಗಳ ಮೇಲೆ ದಾಳಿ ನಡೆಸಿದೆ.
BREAKING NEWS : ಮಂಗಳೂರಿನಲ್ಲಿ `SDPI,PFI’ ಕಚೇರಿಗಳ ಮೇಲೆ `NIA’ ದಾಳಿ : ಪಿಎಫ್ ಐ ಕಾರ್ಯಕರ್ತರಿಂದ ಪ್ರತಿಭಟನೆ
ಇಂದು ಮುಂಜಾನೆ 3.30 ರ ಸುಮಾರಿಗೆ ಬೆಂಗಳೂರು, ಮಂಗಳೂರು ಸೇರಿದಂತೆ ದೇಶದ 10 ರಾಜ್ಯಗಳಲ್ಲಿ ಎನ್ ಐಎ, ಇಡಿ ಪಿಎಫ್ ಐ, ಎಸ್ ಡಿಪಿಐ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.
ತಮಿಳುನಾಡು, ಕೇರಳ ಸೇರಿದಂತೆ 10 ಕ್ಕೂ ಹೆಚ್ಚು ರಾಜ್ಯಗಳಲ್ಲಿ ಎನ್ ಐಎ ಹಾಗೂ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, 100 ಕ್ಕೂ ಹೆಚ್ಚು ಪಿಎಫ್ ಐ ಕಾರ್ಯಕರ್ತರು ವಶಕ್ಕೆ ಪಡೆಯಲಾಗಿದೆ. ಕೇರಳ ಹಾಗೂ ತಮಿಳುನಾಡಿನಲ್ಲಿ ಅತೀ ಹೆಚ್ಚು ಸ್ಥಳಗಳಲ್ಲಿ ದಾಳಿಯಾಗಿದೆ ಎಂದು ವರದಿಯಾಗಿದೆ.
ಬೆಂಗಳೂರಿನಲ್ಲೂ ಎನ್ ಐಎ ದಾಳಿ ನಡೆದಿದ್ದು, ಬೆಂಗಳೂರಿನ ರಿಚ್ಮಂಡ್ ಟೌನ್ ಅಪಾರ್ಟ್ ಮೆಂಟ್ ಮೇಲೆ ದಾಳಿ ಮಾಡಲಾಗಿದೆ. ಅಪಾರ್ಟ್ ಮೆಂಟ್ ಬಳಿ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ.
BIGG NEWS : ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಅರ್ಹ ಫಲಾನುಭವಿಗಳಿಗೆ ಆರೋಗ್ಯ ಕಾರ್ಡ್ ವಿತರಣೆಗೆ ಸೂಚನೆ