ಮೈಸೂರು : ಮೈಸೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಸಾಲ ಭಾದೆ ತಾಳಲಾರದೇ ಬಾವಿಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
BIG NEWS:ಇಂದು ಸದನದಲ್ಲೇ ದಾಖಲೆಸಹಿತ ಸಚಿವರೊಬ್ಬರ ಅಕ್ರಮ ಬಯಲು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
ಮೈಸೂರು ಜಿಲ್ಲೆಯ ಕೃಷ್ಣರಾಜನಗರ ತಾಲೂಕಿನ ಸಂಬರವಳ್ಳಿ ಸಮೀಪದ ತೋಟವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ದಂಪತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಟ್ಟಪ್ಪ (50), ರುಕ್ಮಿಣಿ (40) ಆತ್ಮಹತ್ಯೆ ಮಾಡಿಕೊಂಡ ದಂಪತಿ ಎಂದು ಗುರುತಿಸಲಾಗಿದೆ.
ಕಳೆದ 20 ವರ್ಷಗಳಿಂದ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದ ದಂಪತಿ ಸಾಲ ಭಾದೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
BIGG NEWS : ವಸತಿ ಯೋಜನೆ ಫಲಾನುಭವಿಗಳಿಗೆ ಮನೆ ಹಂಚಿಕೆ ನಿಯಮ ಮತ್ತಷ್ಟು ಸರಳೀಕರಣ : ಸಚಿವ ವಿ.ಸೋಮಣ್ಣ