ಬೆಂಗಳೂರು : ಬೆಂಗಳೂರು ನಗರದ ವಿವಿಧೆಡೆ ಕಾಂಗ್ರೆಸ್ ಪೇಸಿಎಂ(PayCM) ಹೆಸರಿನ ಪೋಸ್ಟರ್ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.
ರಾಜ್ಯ ಸರ್ಕಾರ ಪೋಸ್ಟರ್ ಅಂಟಿಸಿದ ಪ್ರಕರಣವನ್ನು ಸಿಸಿಬಿ ವರ್ಗಾವಣೆ ಮಾಡಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಗಗನ್ ಯಾದವ್ ಮತ್ತು ಬಿ.ಆರ್.ನಾಯ್ಡು ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರು ಕೆಪಿಸಿಸಿ ಸೋಶಿಯಲ್ ಮೀಡಿಯಾ ಖಾತೆಗಳನ್ನು ನಿರ್ವಹಣೆ ಮಾಡುತ್ತಿದ್ದರು ಎನ್ನಲಾಗಿದ್ದು, ಬುಧವಾರ ಬೆಳಗಿನ ಜಾವ ಬೆಂಗಳೂರಿನ ಹಲವೆಡೆ ಪೋಸ್ಟರ್ ಅಂಟಿಸಿರೋದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
BREAKING NEWS : ದೇಶಾದ್ಯಂತ `NIA’ ದಾಳಿ : ಕೊಪ್ಪಳ `PFI’ ಜಿಲ್ಲಾಧ್ಯಕ್ಷ ಅಬ್ದುಲ್ ಫಯಾಜ್ ಎನ್ ಐಎ ವಶಕ್ಕೆ