ಬೆಂಗಳೂರು : ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ(NIA) ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ನಿಷೇಧ ಮಾಡುವ ಸಂಬಂಧ ಎನ್ ಐಎ ದಾಳಿ ನಡೆದಿದೆ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ.
BIGG NEWS: ಶಿವಮೊಗ್ಗದಲ್ಲೂ NIA ದಾಳಿ; PFI ರಾಜ್ಯ ವಲಯ ಅಧ್ಯಕ್ಷ ಶಾಹೀದ್ ಖಾನ್ ವಶಕ್ಕೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ತನಿಖಾ ದಳ(NIA) ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಕಚೇರಿ ಮತ್ತು ನಾಯಕರ ನಿವಾಸದ ಮೇಲೆ ದಾಳಿ ನಡೆಸಿದೆ. SDPI ಮತ್ತು PFIಬ್ಯಾನ್ ಮಾಡುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ. ಕೇಂದ್ರ ಸರ್ಕಾರ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.
ಇನ್ನು ಶಿವಮೊಗ್ಗದಲ್ಲಿ ಶಂಕಿತ ಉಗ್ರರ ಬಂಧನದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಶಂಕಿತ ಉಗ್ರರನ್ನು ಬಂಧಿಸಿದ ಪೊಲೀಸರಿಗೆ ಅಭಿನಂದನೆಗಳನ್ನ ಸಲ್ಲಿಸುತ್ತೇನೆ . ಧರ್ಮ ನೋಡಿ ಪೊಲೀಸರು ಕಾರ್ಯಾಚರಣೆ ಮಾಡಲ್ಲ ಎಂದು ಹೇಳಿದ್ದಾರೆ.