ಹೈದರಾಬಾದ್ : ನಗರದಲ್ಲಿ ಸೆಪ್ಟೆಂಬರ್ 25ರಂದು ನಡೆಯಲಿರುವ ಭಾರತ-ಆಸ್ಟ್ರೇಲಿಯಾ ನಡುವಿನ ಮೂರನೇ ಟಿ20 ಪಂದ್ಯದ ಟಿಕೆಟ್ ಖರೀದಿಗೆ ಕ್ರಿಕೆಟ್ ಖರೀದಿಗೆ ಅಭಿಮಾನಿಗಳು ಮುಗಿಬಿದ್ದಿದ್ದು, ಇಂದು ಸಿಕಂದರಾಬಾದ್ ಜಿಮ್ಖಾನಾ ಮೈದಾನದಲ್ಲಿ ಟಿಕೆಟ್ಗಾಗಿ ನೂಕುನುಗ್ಗಲು ಹಾಗೂ ಕಾಲ್ತುಳಿತ ಉಂಟಾಗಿದೆ. ಇದರಿಂದ ನಾಲ್ಕಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.
#WATCH | Telangana: A stampede broke out at Gymkhana Ground after a huge crowd of cricket fans gathered there to get tickets for #INDvsAUS match, scheduled for 25th Sept at Rajiv Gandhi International Stadium, Hyderabad. Police baton charged to disperse the crowd
4 people injured pic.twitter.com/J2OiP1DMlH
— ANI (@ANI) September 22, 2022
ಇಂದಿನಿಂದ ಆಫ್ಲೈನ್ನಲ್ಲಿ ಟಿಕೆಟ್ ಮಾರಾಟದ ಬಗ್ಗೆ ಘೋಷಿಸುತ್ತಿದ್ದಂತೆ ಕ್ರಿಕೆಟ್ ಪ್ರೇಮಿಗಳು ಜಿಮ್ಖಾನಾ ಮೈದಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಆದರೆ, ಟಿಕೆಟ್ ಖರೀದಿಗೆ ಸಾಕಷ್ಟು ಜನ ಬರುವ ನಿರೀಕ್ಷೆಯಿದ್ದರೂ ಸರಿಯಾದ ವ್ಯವಸ್ಥೆ ಮಾಡಿರಲಿಲ್ಲ ಎಂದು ಹೇಳಲಾಗಿದೆ.
BIGG NEWS : ಮಹಾರಾಷ್ಟ್ರದಲ್ಲಿ ಐದು ಅಂತಸ್ತಿನ ಕಟ್ಟಡದ ಒಂದು ಭಾಗ ಕುಸಿತ : 4 ಮಂದಿ ಸಾವು | Building collaps
ಹೀಗಾಗಿ ಅಭಿಮಾನಿಗಳಿಂದ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಈ ಹಿನ್ನಲೆಯಲ್ಲಿ ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೆಲವರು ಪ್ರಜ್ಞೆ ತಪ್ಪಿ ಬಿದ್ದಿದ್ದು, ಇನ್ನು ಕೆಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.
BIGG NEWS : ಮಹಾರಾಷ್ಟ್ರದಲ್ಲಿ ಐದು ಅಂತಸ್ತಿನ ಕಟ್ಟಡದ ಒಂದು ಭಾಗ ಕುಸಿತ : 4 ಮಂದಿ ಸಾವು | Building collaps