ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಕಮಿಟಿ(ಎಐಸಿಸಿ) ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಹೊಣೆಯನ್ನು ಹೊತ್ತುಕೊಳ್ಳುವವರು ಯಾರು ಎಂಬ ಪ್ರಶ್ನೆಗೆ ಉತ್ತರ ಇನ್ನೂ ಸಿಕ್ಕಿಲ್ಲ, . ಕಾಂಗ್ರೆಸ್ ಅಧ್ಯಕ್ಷೀಯ ಕುರ್ಚಿಯಲ್ಲಿ ಕುಳಿತುಕೊಳ್ಳುವುದಕ್ಕೆ ರಾಹುಲ್ ಗಾಂಧಿ ನಿರಾಕರಿಸಿದ್ದು. ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸುವುದಾಗಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಸ್ಪರ್ಧಿಸಲು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಒಪ್ಪಿಗೆ ನೀಡಿದ್ದಾರೆ. ಪಕ್ಷ ನೀಡಿದ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ, ಪಕ್ಷ ಹೇಳಿದರೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದ್ದರು. ಅದೇ ರೀತಿ ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದರೆ, ಸಚಿನ್ ಪೈಲಟ್ ಅವರಿಗೆ ರಾಜಸ್ಥಾನದ ಅಧಿಕಾರವನ್ನು ನೀಡಬಹುದು ಎಂಬ ಊಹಾಪೋಹವೂ ಇದೆ.
‘ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ’ಕ್ಕೆ ‘ಸರ್ಪ ಸಂಸ್ಕಾರ ಸೇವೆ’ಗೆ ತೆರಳೋರಿಗೆ ಭಕ್ತರಿಗೆ ಬಿಗ್ ಶಾಕ್: ‘ದರ ಹೆಚ್ಚಳ’
BIG BREAKING NEWS: ಭಾರತದಾದ್ಯಂತ NIA ದಾಳಿ, 106 ಪಿಎಫ್ಐ ಸದಸ್ಯರ ಬಂಧನ