ಶಿವಮೊಗ್ಗ: ನಗರಲ್ಲಿ ಶಂಕಿತ ಉಗ್ರರನ್ನು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬ್ ತಯಾರಿಗೆ ಬೇಕಿರುವ ಕಚ್ಚಾ ಸಾಮಗ್ರಿಗಳೂ ಸೇರಿದಂತೆ ಕೆಲ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಲಕ್ಷ್ಮೀ ಪ್ರಸಾದ್ ಹೇಳಿದ್ದಾರೆ.
BIGG NEWS: ಕಲಬುರಗಿಯಲ್ಲಿ ಮರಳು ಸಾಗಣೆಗೆ ಲಂಚ ಪಡೆಯುತ್ತಿದ್ದ ಮೂವರು ಲೋಕಾಯುಕ್ತರ ಬಲೆಗೆ
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಇತ್ತೀಚೆಗೆ ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ಪ್ರೇಮ್ಸಿಂಗ್ ಹತ್ಯೆ ಪ್ರಕರಣದಲ್ಲಿ ಜಬೀ ಬಂಧನವಾಗಿತ್ತು. ಜಬೀ ವಿಚಾರಣೆ ಮಾಡಿದಾಗ ಶಾರಿಕ್ ವಿಚಾರ ಬೆಳಕಿಗೆ ಬಂತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಈವರೆಗೆ 11 ಸ್ಥಳಗಳಲ್ಲಿ ದಾಳಿ ಮಾಡಿ ಹಲವು ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಬಂಧಿತರಿಂದ 14 ಮೊಬೈಲ್ ಮತ್ತು 1 ಡಾಂಗಲ್ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.
BIGG NEWS: ಕಲಬುರಗಿಯಲ್ಲಿ ಮರಳು ಸಾಗಣೆಗೆ ಲಂಚ ಪಡೆಯುತ್ತಿದ್ದ ಮೂವರು ಲೋಕಾಯುಕ್ತರ ಬಲೆಗೆ
ಬಂಧಿತರಿಂದ ಎರಡು ಲ್ಯಾಪ್ಟಾಪ್, ಒಂದು ಪೆನ್ಡ್ರೈವ್ ಹಾಗೂ ಇತರ ಎಲೆಕ್ಟ್ರಾನಿಕ್ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಸ್ಫೋಟದ ಸ್ಥಳದಲ್ಲಿ ಬಾಂಬ್ನ ಅವಶೇಷಗಳು ಪತ್ತೆಯಾಗಿವೆ. ಆಗಸ್ಟ್ ತಿಂಗಳಲ್ಲಿ ರಾಷ್ಟ್ರಧ್ವಜ ಸುಟ್ಟಿರುವ ಮಾಹಿತಿಯೂ ಲಭ್ಯವಾಗಿದೆ. ಬಂಧಿತರಿಂದ ಬಾಂಬ್ ತಯಾರಿಸಲು ಬೇಕಾದ ಸಾಮಗ್ರಿಗಳನ್ನೂ ವಶಪಡಿಸಿಕೊಂಡಿದ್ದೇವೆ ಎಂದು ತಿಳಿಸಿದರು.