ಬೆಂಗಳೂರು : ಭ್ರಷ್ಟಾಚಾರ ತಡೆ ಕಾಯ್ದೆಯಡಿ ತಮ್ಮ ಮತ್ತು ಇತರರ ವಿರುದ್ಧ ದಾಖಲಾಗಿದ್ದ ಲಂಚ ಪ್ರಕರಣ ಸಂಬಂಧ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದ್ದು, ಬಿಎಸ್ವೈ ವಿರುದ್ಧದ ತನಿಖೆಗೆ ಮಧ್ಯಂತರ ತಡೆ ನೀಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ನ್ಯಾಯಮೂರ್ತಿ ಡಿ.ವೈ ಚಂದ್ರಚೂಡರಿದ್ದ ಪೀಠ ಈ ಆದೇಶ ಹೊರಡಿಸಿದೆ, ಭ್ರಷ್ಟಾಚಾರ ತಡೆ ಕಾಯ್ದೆಯಡಿ ತಮ್ಮ ಮತ್ತು ಇತರರ ವಿರುದ್ಧ ದಾಖಲಾಗಿದ್ದ ಲಂಚ ಪ್ರಕರಣ ಸಂಬಂಧ ದೂರನ್ನು ಮರುಸ್ಥಾಪಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಸಲ್ಲಿಸಿದ್ದರು. ಪ್ರಕರಣ ಸಂಬಂಧ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದ್ದು, ಬಿಎಸ್ವೈ ವಿರುದ್ಧದ ತನಿಖೆಗೆ ಮಧ್ಯಂತರ ತಡೆ ನೀಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಯಡಿಯೂರಪ್ಪ ಜನಪ್ರತಿನಿಧಿಯಾಗಿರುವ ಹಿನ್ನೆಲೆ ಅವರ ವಿರುದ್ಧ ತನಿಖೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಆದರೆ ಬಿ.ವೈ ವಿಜಯೇಂದ್ರ ಸೇರಿದಂತೆ ಉಳಿದ ಆರೋಪಿಗಳ ವಿರುದ್ಧ ತನಿಖೆಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಕುಟುಂಬ ಸದಸ್ಯರು ಅಧಿಕಾರ ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣ ಕುರಿತು ಎಫ್ ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಇತ್ತೀಚೆಗೆ ಆದೇಶಿಸಿತ್ತು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆಗೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನ್ಸ್ ಸ್ಟ್ರಕ್ಷನ್ ಕಂಪನಿಯಿಂದ ಕೋಟ್ಯಂತರ ರೂ. ನಗದು ಹಾಗೂ ಶೆಲ್ ಕಂಪನಿಗಳ ಮೂಲಕ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಐಪಿಸಿಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ನಗರದ ಬಿದರಹಳ್ಳಿಯ ಕೋನದಾಸಪುರದಲ್ಲಿ ಬಿಡಿಎ ಅಪಾರ್ಟ್ಮೆಂಟ್ ನಿರ್ಮಾಣಕ್ಕೆ ಟೆಂಡರ್ ನೀಡಿದ್ದಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.
Supreme Court issues notice on former Karnataka CM BS Yediyurappa's plea challenging the Karnataka HC order which restored a bribery complaint filed against him & others under the Prevention of Corruption Act
SC also stays further proceedings as far as petitioner is concerned. pic.twitter.com/pmIlvRppEI
— ANI (@ANI) September 23, 2022