ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ-2022 ಪ್ರಯುಕ್ತ KSRTCಯಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಮೈಸೂರು ದಸರಾ ಸೇರಿದಂತೆ ರಾಜ್ಯದ ವಿವಿಧ ಪ್ರವಾಸಿ ಸ್ಥಳಗಳಿಗೆ ಪ್ರವಾಸಕ್ಕಾಗಿ ಕರಾರಸಾ ನಿಗಮದಿಂದ ವಿಶೇಷ ಪ್ಯಾಕೇಜ್ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕೆ ಎಸ್ ಆರ್ ಟಿ ಸಿಯು, ಮೈಸೂರು ದಸರಾ-2022ನೇ ಸಾಲಿನ ದಸರಾ ಮಹೋತ್ಸವದ ಅಂಗವಾಗಿ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ಪ್ರಸ್ತುತ ಕಾರ್ಯಾಚರಣೆ ಮಾಡಲಾಗುತ್ತಿರುವ ಕರ್ನಾಟಕ ಸಾರಿಗೆ(ವೇಗದೂತ) ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್)ಹಾಗೂ ಅಂಬಾರಿ ಕ್ಲಬ್ ಕ್ಲಾಸ್ಸಾರಿಗೆ ಸೇವೆಗಳ ಜೊತೆಗೆ ಈ ಕೆಳಕಂಡಂತೆ ವಿಶೇಷ ಪ್ಯಾಕೇಜ್ ಸಾರಿಗೆ ಸೇವೆಗಳ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದಿದೆ.
BIG BREAKING NEWS: ಮುರುಘಾ ಶ್ರೀಗಳಿಗೆ ಬಿಗ್ ಶಾಕ್: ಜಾಮೀನು ಅರ್ಜಿ ತಿರಸ್ಕಾರ | Murugha Sri
1. ಮೈಸೂರಿಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಕರ್ನಾಟಕ ಸಾರಿಗೆ ವಾಹನಗಳಿಂದ ಒಂದು ದಿನದ ವಿಶೇಷ ಪ್ರವಾಸ ಸಾರಿಗೆಗಳ ಕಾರ್ಯಾಚರಣೆ:
ಅ) ಗಿರಿದರ್ಶಿನಿ : ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿರಂಗನ ಬೆಟ್ಟ, ನಂಜನಗೂಡು ಮತ್ತು ಚಾಮುಂಡಿ ಬೆಟ್ಟ (ಪ್ರಯಾಣ ದರ ವಯಸ್ಕರಿಗೆ: ರೂ.400/- ಮತ್ತು ಮಕ್ಕಳಿಗೆ: ರೂ.250/-)
ಆ) ಜಲದರ್ಶಿನಿ: ಗೋಲ್ಡನ್ ಟೆಂಪಲ್ (ಬೈಲಕುಪ್ಪೆ), ದುಬಾರೆ ಅರಣ್ಯ ನಿಸರ್ಗಧಾಮ, ರಾಜಾಸೀಟ್, ಹಾರಂಗಿ ಜಲಾಶಯ ಮತ್ತು ಕೆ.ಆರ್.ಎಸ್. (ಪ್ರಯಾಣ ದರ ವಯಸ್ಕರಿಗೆ: ರೂ.450/- ಮತ್ತು ಮಕ್ಕಳಿಗೆ: ರೂ.250/-)
ಇ) ದೇವದರ್ಶಿನಿ : ನಂಜನಗೂಡು, ಬ್ಲಫ್, ಮುಡುಕುತೊರೆ, ತಲಕಾಡು, ಸೋಮನಾಥಪುರ, ಶ್ರೀರಂಗಪಟ್ಟಣ (ಪ್ರಯಾಣ ದರ ವಯಸ್ಕರಿಗೆ: ರೂ.300/- ಮತ್ತು ಮಕ್ಕಳಿಗೆ: ರೂ.175/-)
ಈ) ಮೈಸೂರು ನಗರ ದೀಪಾಲಂಕಾರ ದರ್ಶನ; ನಗರ ಬಸ್ ನಿಲ್ದಾಣದಿಂದ ಅರಮನೆ ರಸ್ತೆ, ಮೈಸೂರು ಕೇಂದ್ರೀಯ ಬಸ್ ನಿಲ್ದಾಣ ರಸ್ತೆ, ಎಲ್.ಐ.ಸಿ ವೃತ್ತ, ಬಂಬೂ ಬಜಾರ್ ರಸ್ತೆ, ರೈಲ್ವೆ ನಿಲ್ದಾಣ ವೃತ್ತ, ಜೆ.ಎಲ್.ಬಿ ರಸ್ತೆ(ಮೂಡ ಕಛೇರಿ ರಸ್ತೆ) ಮತ್ತು ನಗರ ಬಸ್ ನಿಲ್ದಾಣ(ಪ್ರಯಾಣ ದರ ವಯಸ್ಕರಿಗೆ: ರೂ.200/- ಮತ್ತು ಮಕ್ಕಳಿಗೆ: ರೂ.150/-) ನಗರ ವೋಲ್ವೋ ವಾಹನಗಳಿಂದ-ಸAಜೆ 6.00 ಕ್ಕೆ ನಿರ್ಗಮನ
ಉ) ಮೈಸೂರು ದರ್ಶಿನಿ: ನಗರ ವೋಲ್ವೋ ವಾಹನಗಳಿಂದ -ನಂಜನಗೂಡು, ಚಾಮುಂಡಿಬೆಟ್ಟ, ಮೃಗಾಲಯ, ಅರಮನೆ, ಶ್ರೀರಂಗಪಟ್ಟಣ, ಕೆ.ಆರ್.ಎಸ್(ಪ್ರಯಾಣ ದರ ವಯಸ್ಕರಿಗೆ: ರೂ.400/- ಮತ್ತು ಮಕ್ಕಳಿಗೆ: ರೂ.200/-)
2. ಮೈಸೂರಿಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಐರಾವತ ಕ್ಲಬ್ ಕ್ಲಾಸ್ ವಾಹನಗಳಿಂದ ಒಂದು ದಿನದ ವಿಶೇಷ ಪ್ರವಾಸ ಸಾರಿಗೆಗಳ ಕಾರ್ಯಾಚರಣೆ:
ಅ) ಮಡಿಕೇರಿ ಪ್ಯಾಕೇಜ್ :ನಿಸರ್ಗಧಾಮ-ಗೋಲ್ಡನ್ ಟೆಂಪಲ್-ಹಾರAಗಿ ಜಲಾಶಯ-ರಾಜಾ ಸೀಟ್-ಅಬ್ಬೀಫಾಲ್ಸ್(ಪ್ರಯಾಣ ದರ ವಯಸ್ಕರಿಗೆ:(ರೂ.1200/- ಮತ್ತು ಮಕ್ಕಳಿಗೆ: ರೂ.1000/-)
ಆ) ಊಟಿ ಪ್ಯಾಕೇಜ್: ಊಟಿ-ಬಟಾನಿಕಲ್ ಗಾರ್ಡನ್-ಇಟಾಲಿಯನ್ & ರೋಸ್ ಗಾರ್ಡನ್-ಬೋಟ್ ಹೌಸ್ (ಪ್ರಯಾಣ ದರ ವಯಸ್ಕರಿಗೆ: ರೂ.1600/- ಮತ್ತು ಮಕ್ಕಳಿಗೆ: ರೂ.1200/-)
ಈ ಮೇಲ್ಕಂಡ ಪ್ಯಾಕೇಜ್ ಸಾರಿಗೆಗಳು(ಮೈಸೂರು ನಗರ ದೀಪಾಲಂಕಾರ ದರ್ಶನ ಹೊರತುಪಡಿಸಿ) ಬೆಳಿಗ್ಗೆ ಮೈಸೂರಿನಿಂದ ಹೊರಟು ಮೇಲ್ಕಂಡ ವಿವಿಧ ಸ್ಥಳಗಳನ್ನು ಸಂದರ್ಶಿಸಿದ ನಂತರ ಸಾಯಂಕಾಲ ಮೈಸೂರಿಗೆ ವಾಪಸ್ಸಾಗುತ್ತವೆ.
BIGG NEWS : ಕೇಂದ್ರ ಸರ್ಕಾರ ಮಹತ್ವದ ಕ್ರಮ ; ಈಗ ‘ಬ್ಯಾಂಕ್ ವಂಚನೆ’ಯಿಂದ ತಪ್ಪಿಸಿಕೊಳ್ಳೋದು ತುಂಬಾನೇ ಸುಲಭ
ಅಂದಹಾಗೇ ಈ ಪ್ಯಾಕೇಜ್ಗಳನ್ನು ದಿನಾಂಕ:01.10.2022 ರಿಂದ 10.10.2022ರ ಅವಧಿಯವರೆಗೆ ಜಾರಿಯಲ್ಲಿರಲಿದೆ. ಪ್ರವಾಸಿಗರು ಇ-ಟಿಕೇಟ್ ಬುಕಿಂಗ್ನ್ನು ksrtc.karnataka.gov.in ವೆಬ್ ಸೈಟ್ ಮುಖಾಂತರ, ಮೊಬೈಲ್ ಬುಕಿಂಗ್ ಹಾಗೂ ಬುಕಿಂಗ್ ಕೌಂಟರ್ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ ಎಂದು ಹೇಳಿದೆ.