ಬೆಂಗಳೂರು : ಸಾಮಾನ್ಯ ಪ್ರವೇಶ ಪರೀಕ್ಷೆ (CET) ಪುನರಾವರ್ತಿತ ವಿದ್ಯಾರ್ಥಿಗಳ 2021 ನೇ ಸಾಲಿನ ದ್ವಿತೀಯ ಪಿಯು ಅಂಕಗಳನ್ನು 2022 ನೇ ಸಾಲಿನ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಪರಿಗಣಿಸುವ ವಿಚಾರದಲ್ಲಿ ಉಂಟಾಗಿದ್ದ ಬಿಕ್ಕಟ್ಟಿಗೆ ಹೈಕೋರ್ಟ್ ಅಂತಿ ತೆರೆ ಎಳೆದಿದೆ.
ವೃತ್ತಿಪರ ಕೋರ್ಸ್ ಗಳ ಸಿಇಡಿ ರ್ಯಾಕಿಂಗ್ ಗೆ ಸಂಬಂಧಿಸಿದಂತೆ ಉಂಟಾಗಿದ್ದ ಬಿಕ್ಕಟ್ಟು ಬಗೆಹರಿಸಲು ರಾಜ್ಯ ಸರ್ಕಾರ ನೇಮಿಸಿದ್ದ ಸಮಿತಿಯ ವರದಿಯನ್ನು ಹೈಕೋರ್ಟ್ ಒಪ್ಪಿಕೊಂಡಿದೆ. ತಜ್ಞರ ಶಿಫಾರಸು ಮಾಡಿರುವ ರೂಟ್ ಮೀನ್ ಸ್ಕ್ವೇರ್ ವಿಧಾನ ಅಳವಡಿಸಿ ಹೊಸದಾಗಿ ಸಿಇಟಿ ರ್ಯಾಂಕ್ ಪಟ್ಟಿ ಪ್ರಕಟಿಸಲು ಸರ್ಕಾರಕ್ಕೆ ಅನುಮತಿ ನೀಡಿ ಆದೇಶಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ, ಇದು ಸ್ವಾಗತಾರ್ಹವಾಗಿದ್ದು, ಪರಿಷ್ಕೃ ಸಿಇಟಿ ರ್ಯಾಕಿಂಗ್ ಪಟ್ಟಿಯನ್ನು ಸೆ.29 ರಂದು ಬಿಡುಗಡೆ ಮಾಡಲಾಗುವುದು. ಜೊತೆಗೆ ಅಕ್ಟೋಬರ್ 3 ರಿಂದ ಪ್ರವೇಶಾತಿ ಮೊದಲ ಸುತ್ತಿನ ಕೌನ್ಸೆಲಿಂಗ್ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.