ನೆಲಮಂಗಲ: ಪೇ ಸಿಎಂ ಪೋಸ್ಟರ್ ಅಭಿಯಾನಕ್ಕೆ ಟ್ವಿಸ್ಟ್ ಸಿಕ್ಕಿದೆ. ಪೋಸ್ಟರ್ ಅಂಟಿಸಿದ ಆರೋಪದ ಮೇಲೆ ಮೂವರು ಕಾಲೇಜು ವಿದ್ಯಾರ್ಥಿಗಳು ಸೇರಿ ಅನೇಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕಳೆದ ರಾತ್ರಿ ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ಮೂವರು ಪೋಸ್ಟರ್ ಅಂಟಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ನೆಲಮಂಗಲ ಟೌನ್ ಠಾಣೆಯಲ್ಲಿ ಆರು ಜನರು ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತಾಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ನಾರಾಯಣಗೌಡ ಹಾಗೂ ಕಾರ್ಮಿಕ ಘಟಕದ ಅಧ್ಯಕ್ಷ ರಾಮಕೃಷ್ಣ ಮೇಲೂ ಎಫ್ಐಆರ್ ದಾಖಲಾಗಿದೆ. ವಿದ್ಯಾರ್ಥಿಗಳಿಗೆ ಪೋಸ್ಟರ್ ಅಂಟಿಸುವಂತೆ ಹೇಳಿದ್ದಾರೆಂದು ಇವರ ಮೇಲೆ ಕೇಸ್ ದಾಖಲಾಗಿದೆ.