ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಪೇ ಸಿಎಂ ಪೋಸ್ಟರ್ ಅಭಿಯಾನದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಳ್ಳಲು ಮುಂದಾಗಿದ್ದು, ಪರವಾನಗಿ ಇಲ್ಲದೇ ಪೋಸ್ಟರ್ ಅಂಟಿಸಿದವರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಲು ನಿರ್ಧರಿಸಿದೆ ಎನ್ನಲಾಗಿದೆ.
ಕಾಂಗ್ರೆಸ್ ನ ಪೇ ಸಿಎಂ ಅಭಿಯಾನದ ಹಿನ್ನೆಲೆಯಲ್ಲಿ ಈಗಾಗಲೇ ಕೆಲವರನ್ನು ಬಂಧಿಸಲಾಗಿದ್ದು, ಪೋಸ್ಟರ್ ಅಂಟಿಸಿದ ಕಾಂಗ್ರೆಸ್ ನ ಪ್ರಮುಖ ನಾಯಕರ ಮೇಲೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಎನ್ ಸಿ ಆರ್ ದಾಖಲಿಸಲಾಗಿದೆ. ಇದರ ಮಧ್ಯೆಯೂ ಕಾಂಗ್ರೆಸ್ ಪೋಸ್ಟರ್ ಅಭಿಯಾನವನ್ನು ಮುಂದುವರೆಸಿದೆ.
BREAKING NEWS : ಕಲಬುರಗಿಯಲ್ಲಿ ಗಾಂಜಾ ದಂಧೆಕೋರರ ಅಟ್ಟಹಾಸ : ಪೊಲೀಸರ ಮೇಲೆ ಹಲ್ಲೆ, ಸಿಪಿಐ ಗಂಭೀರ
ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪರವಾನಗಿ ಇಲ್ಲದೆ ಪೋಸ್ಟರ್ ಅಂಟಿಸಿದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಒಂದು ಸಾವಿರ ರೂ.ನಿಂದ 10 ಸಾವಿರ ರೂ.ವರೆಗೆ ದಂಡ ವಿಧಿಸಲು ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.