ಬೆಂಗಳೂರು : ಕರ್ನಾಟಕದಲ್ಲಿ ಮತ್ತೊಂದು ಧರ್ಮ ದಂಗಲ್ ಶುರುವಾಗುವ ಸಾಧ್ಯತೆ ಇದೆ. ರಾಜ್ಯದಲ್ಲೂ ಮದರಸಾ ನಿಷೇಧಿಸುವಂತೆ ವಿವಿಧ ಹಿಂದೂಪರ ಸಂಘಟನೆಗಳು ಶಿಕ್ಷಣ ಇಲಾಖೆಗೆ ಮನವಿ ಮಾಡಿವೆ.
ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್ಗೆ ಟೆಂಪೋಗೆ ಡಿಕ್ಕಿ ಹೊಡೆದು ಐವರು ವಲಸೆ ಕಾರ್ಮಿಕರು ಸ್ಥಳದಲ್ಲೇ ಸಾವು
ಮದರಸಗಳು ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿವೆ. ಹೀಗಾಗಿ ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ಸರ್ಕಾರ ನಿಷೇಧ ಮಾಡಿದಂತೆ ಕರ್ನಾಟಕದಲ್ಲೂ ಮದರಸಗಳನ್ನು ಬ್ಯಾನ್ ಮಾಡಿ ಅಲ್ಲಿ ಓದುತ್ತಿರುವ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಮಾಡಬೇಕು ಎಂದು ಶಿಕ್ಷಣ ಇಲಾಖೆಗೆ ಮನವಿ ಮಾಡಲಾಗಿದೆ.
BIGG NEWS : ಬೆಸ್ಕಾಂ ಗ್ರಾಹಕರಿಗೆ ಗುಡ್ ನ್ಯೂಸ್ : ಮನೆಗಳಿಗೆ `ಉಚಿತ ಡಿಜಿಟಲ್ ವಿದ್ಯುತ್ ಮೀಟರ್’ ಅಳವಡಿಕೆ
ಮದರಸಾ ಶಿಕ್ಷಕರಿಗೆ ಯಾವುದೇ ಪಾಠ ಬೋಧನೆಗೆ ಅಹರ್ತೆ ಇರುವುದಿಲ್ಲ. ಮಕ್ಕಳಿಗೆ ಗಣಿತ ಇತಿಹಾಸ ಭಾಷೆಗಳ ಪರಿಚಯವೇ ಮದರಸಾಗಳಲ್ಲಿ ಮಾಡುವುದಿಲ್ಲ. ಹೀಗಾಗಿ ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಹೊಂದಿರುವ ಮದರಸಾಗಳನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಹಿಂದೂಪರ ಸಂಘಟನೆಗಳು ಒತ್ತಾಯಿಸಿವೆ.