ಬೆಂಗಳೂರು: ಮಾಜಿ ಸಿಎಂ ಎಸ್ ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆದುಕೊಳ್ಳಲಾಗುತ್ತಿದೆ ಅಂತ ತಿಳಿದುಬಂದಿದೆ.
ಶನಿವಾರ ಸಂಜೆ ಎಸ್ ಎಂ ಕೃಷ್ಣ ಅವರಿಗೆ ಜ್ವರ ಕಾಣಿಸಿಕೊಂಡಿದೆ, ಈ ಹಿನ್ನಲೆಯಲ್ಲಿ ಅವರನ್ನು ಕೂಡಲೇ ಹತ್ತಿರ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ, ಆದರೆ ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚನೆ ನೀಡಿದ ಹಿನ್ನಲೆಯಲ್ಲಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ ಅಂತ ತಿಳಿದು ಬಂದಿದೆ. ಸದ್ಯ ಅವರ ಆರೋಗ್ಯದ ಬಗ್ಗೆ ಇಂದು ವೈದ್ಯರು ಹೆಲ್ತ್ ಬುಲಟಿನ್ ಅನ್ನು ಹೊರಡಿಸಲಿದ್ದಾರೆ ಅಂತ ತಿಳಿದು ಬಂದಿದೆ.
BIGG NEWS : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ : ಶೀಘ್ರವೇ ಸಚಿವ ಸಂಪುಟ ವಿಸ್ತರಣೆ!