ಬೆಂಗಳೂರು: ನಿನ್ನೆ ರಾತ್ರಿ ತೀವ್ರ ಜ್ವರದಿಂದಾಗಿ ಮಾಜಿ ಸಿಎಂ ಎಸ್.ಎಂ ಕೃಷ್ಣ ( Farmer CM SM Krishna ) ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಮಣಿಪಾಲ್ ಆಸ್ಪತ್ರೆಯ ವೈದ್ಯರ ತಂಡದಿಂದ ಎಸ್ ಎಂ ಕೃಷ್ಣ ಅವರಿಗೆ ಚಿಕಿತ್ಸೆ ಮುಂದುವರೆಸಿದೆ. ಈ ನಡುವೆ ಹಲವು ಸುಳ್ಳು ಸುದ್ದಿಗಳು ಅವರ ಆರೋಗ್ಯದ ಬಗ್ಗೆ ಹಬ್ಬಿವೆ. ಈ ಊಹಾಪೋಹಗಳಿಗೆ ಯಾರೂ ಕಿವಿಗೊಡದಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ.
ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರಿಗೆ ನಿನ್ನೆ ರಾತ್ರಿ ಜ್ವರ ಕಾಣಿಸಿಕೊಂಡಿತ್ತು. ಈ ಕಾರಣದಿಂದ ಅವರನ್ನು ಕೂಡಲೇ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅವರನ್ನು ಪರೀಕ್ಷೆಗೆ ಒಳಪಡಿಸಿದಂತ ಮಣಿಪಾಲ್ ಆಸ್ಪತ್ರೆಯ ಡಾ.ಸತ್ಯನಾರಾಯಣ್ ಮತ್ತು ಡಾ.ಸುನೀಲ್ ಕಾರಂತ್ ವೈದ್ಯರ ತಂಡವು, ಅವರಿಗೆ ಶ್ವಾಸಕೋಶದ ಸಮಸ್ಯೆ ಇರೋದನ್ನು ಪತ್ತೆ ಹಚ್ಚಿತ್ತು. ಈ ಬಳಿಕ ಕೂಡಲೇ ಐಸಿಯುನಲ್ಲಿ ಅವರನ್ನು ಇರಿಸಿ, ಸೂಕ್ತ ಚಿಕಿತ್ಸೆಯನ್ನು ವೈದ್ಯರ ತಂಡ ಮುಂದುವರೆಸಿದೆ.
BREAKING NEWS: ಬೆಳಗಾವಿಯಲ್ಲಿ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು, ನಾಲ್ವರ ಸ್ಥಿತಿ ಗಂಭೀರ | Accident
ಇಂದು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವಂತ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಅವರೊಂದಿಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಕೂಡ ಸಾಥ್ ನೀಡಿದ್ದರು.
ಈ ಬೆನ್ನಲ್ಲೇ ಎಸ್ ಎಂ ಕೃಷ್ಣ ಅವರ ಆರೋಗ್ಯದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರ, ಇನ್ನಿಲ್ಲ ಎಂಬುದಾಗಿ ಸುದ್ದಿಗಳು ಹರಿದಾಡುತ್ತಿವೆ. ಈ ವಿಷಯವನ್ನು ಕಂಡಂತ ಕುಟುಂಬಸ್ಥರು ಮಾಜಿ ಸಿಎಂ ಎಸ್ ಎಂ ಕೃಷ್ಣ ಆರೋಗ್ಯ ಸ್ಥಿರವಾಗಿದೆ. ಅವರಿಗೆ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ. ಯಾರೂ ಆತಂಕಕ್ಕೆ ಒಳಗಾಗಬೇಡಿ. ಊಹಾಪೋಹಗಳಿಗೆ ಕಿವಿಗೊಡದಂತೆ ಮನವಿ ಮಾಡಿದ್ದಾರೆ.
ತಮಿಳುನಾಡು: ಚಲಿಸುತ್ತಿದ್ದ ರೈಲಿನಡಿ ಸಿಲುಕುತ್ತಿದ್ದವನ ಜೀವ ಉಳಿಸಿದ ರಕ್ಷಣಾ ಪಡೆ… ಎದೆ ಝಲ್ಲೆನಿಸುವ ದೃಶ್ಯ ವೈರಲ್