ಬೆಂಗಳೂರು: ರಾಜ್ಯಾಧ್ಯಂತ ಕಾಂಗ್ರೆಸ್ ನಿಂದ ಪೇ ಸಿಎಂ ಅಭಿಯಾನವನ್ನು ಆರಂಭಿಸಲಾಗಿದೆ. ಈ ಮೂಲಕ ಸರ್ಕಾರ ಮುಜುಗರಕ್ಕೆ ಒಳಗಾಗುವಂತೆ ಆಗಿದೆ. ಈ ನಡುವೆ ರಾಜ್ಯ ಸರ್ಕಾರದಿಂದ ಕಾಂಗ್ರೆಸ್ ಅಭಿಯಾನಕ್ಕೆ ಪರ್ಯಾಯವಾಗಿ ನನಗೆ ಯಾರು ಲಂಚ ಕೊಡಬೇಕಾಗಿಲ್ಲ. ನಾನು ಭ್ರಷ್ಟ ಅಧಿಕಾರಿಯಾಗಲಾರೆ ಎಂಬ ಅಭಿಯಾನದ ಆದೇಶವನ್ನು ಹೊರಡಿಸಲಾಗಿದೆ. ಈ ಮೂಲಕ ಕಾಂಗ್ರೆಸ್ ಗೆ ಟಕ್ಕರ್ ನೀಡಿದೆ.
ಈ ಕುರಿತಂತೆ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ ಪ್ರಸಾದ್ ಅವರು ಸರ್ಕಾರದ ಕಾರ್ಯದರ್ಶಿಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧಿಕಾರಿಗಳಿಗೆ ಟಿಪ್ಪಣಿ ಹೊರಡಿಸಿದ್ದಾರೆ.
ಅವರು ಹೊರಡಿಸಿರುವಂತ ಆದೇಶದಲ್ಲಿ ಸಿಟಿಜೆನ್ ಎನ್ ಕ್ವೈರಿ ಕೌನ್ಸಿಲ್ ಮತ್ತು ಸಿಐಸಿ ಟ್ರಸ್ಟ್ ವತಿಯಿಂದ ಸ್ವೀಕೃತವಾಗಿರುವ ದಿನಾಂಕ 12-08-2022ರ ಪತ್ರದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಅಭಿಯಾನ 02-10-2022 ರಿಂದ 20-10-2023ರವರೆಗೆ ಹಮ್ಮಿಕೊಂಡಿದೆ ಎಂದಿದ್ದಾರೆ.
ಸದರಿ ಸಂಸ್ಥೆಯು ನನಗೆ ಯಾರು ಲಂಚ ಕೊಡಬೇಕಾಗಿಲ್ಲ. ನಾನು ಭ್ರಷ್ಟ ಅಧಿಕಾರಿಯಾಗಲಾರೆ ಎಂಬ ಶೀರ್ಷಿಕೆಯ ನಾಮಫಲಕವನ್ನು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಯಲ್ಲಿ ಅಳವಡಿಸಲು ಆದೇಶ ಮತ್ತು ಸುತ್ತೋಲೆ ಹೊರಡಿಸುವಂತೆ ಮನವಿ ಮಾಡಿರುತ್ತಾರೆ. ಈ ಮನವಿ ಪ್ತರವು ಸ್ವಯಂ ವೇದ್ಯವಾಗಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.