ಬೆಂಗಳೂರು: ರಾಜ್ಯದ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ( Farmer CM SM Krishna ) ಅವರು ಆರೋಗ್ಯ ಚೇತರಿಕೆಯಾಗಿದೆ. ಎರಡು, ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಅವರು ಮನೆಗೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು.
ಸಿಡಿಗೆ ತಡೆಯಾಜ್ಞೆ ತರುವಲ್ಲಿ ತೋರಿದ ಆಸಕ್ತಿ ಇಲಾಖೆಯ ಕೆಲಸದಲ್ಲಿ ತೋರಿದ್ರೆ ಈ ಸ್ಥಿತಿ ಬರುತ್ತಿರಲಿಲ್ಲ – ಕಾಂಗ್ರೆಸ್
ಇಂದು ಮಣಿಪಾಲ್ ಆಸ್ಪತ್ರೆಗೆ ( Manipal Hospital ) ಭೇಟಿ ನೀಡಿ, ಹಿರಿಯ ನಾಯಕ ಎಸ್.ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದ ಹಿರಿಯ ನಾಯಕ ಎಸ್ ಎಂ ಕೃಷ್ಣ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಹೇಳಿದರು.
ನಿರಂತರ ಚಿಕಿತ್ಸೆಯಿಂದ ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಎರಡು ಮೂರು ದಿನಗಳಲ್ಲಿ ಅವರು ಡಿಸ್ಚಾರ್ಜ್ ಆಗುತ್ತಾರೆ. ರಾಜ್ಯದ ಜನರು ಯಾವುದೇ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ರಾಷ್ಟ್ರಪತಿಗಳಿಂದ ನಾಳೆ ದಸರಾ ಉದ್ಘಾಟನೆ
ನಾಳೆಯ ದಸರಾ ಉದ್ಘಾಟನೆಗೆ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಆಗಮಿಸುತ್ತಿದ್ದಾರೆಮ ಅವರಿಂದ ಚಾಮುಂಡೇಶ್ವರಿ ದೇವಿ ಪೂಜೆ ಮತ್ತು ದಸರಾ ಉದ್ಘಾಟನೆ ನಡೆಯಲಿದೆ. ರಾಜ್ಯದಲ್ಲಿ ವಿಜೃಂಭಣೆಯಿಂದ ದಸರಾ ಆಚರಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.