ಮೈಸೂರು : ನಾಳೆ ಸೆ.26 ರಂದು ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರು ದಸರಾಗೆ ಚಾಲನೆ ನೀಡಲಿದ್ದು, ಈ ಹಿನ್ನೆಲೆ ನಾಳೆ ಬೆಳಗ್ಗೆ 11:30 ರವರೆಗೆ ಸಾರ್ವಜನಿಕರಿಗೆ ಚಾಮುಂಡೇಶ್ವರಿ ದರ್ಶನ ನಿರ್ಬಂಧಿಸಲಾಗಿದೆ.
ಈ ಬಗ್ಗೆ ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಪ್ರಕಟಣೆ ಹೊರಡಿಸಿದ್ದು, ದಸರಾ ಉದ್ಘಾಟನೆ ಹಿನ್ನೆಲೆ ನಾಳೆ ಬೆಳಗ್ಗೆ 11:30 ರವರೆಗೆ ಸಾರ್ವಜನಿಕರಿಗೆ ಚಾಮುಂಡೇಶ್ವರಿ ದೇವಿ ದರ್ಶನ ನಿರ್ಬಂಧಿಸಲಾಗಿದೆ ಎಂದು ಸೂಚ ನೆ ಹೊರಡಿಸಿದ್ದಾರೆ.
ಅದೇ ರೀತಿ ರಾಷ್ಟ್ರಪತಿಯವರ ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಸಾರ್ವಜನಿಕರು ಎಂದಿನಂತೆ ಭಾಗವಹಿಸಬಹುದು ಹಾಗೂ ಕಾರ್ಯಕ್ರಮ ಮುಗಿದ ಬಳಿಕ ದೇವಿ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.