ಬೆಂಗಳೂರು : ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇದೇ ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಬೆಂಗಳೂರಿನಲ್ಲೇ ಮತದಾನ ಮಾಡಲಿದ್ದಾರೆ.
ಹೌದು, ರಾಹುಲ್ ಗಾಂಧಿ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ತಮ್ಮ ಮತ ಚಲಾಯಿಸಲಿದ್ದಾರೆ. ಹೌದು, ಕರ್ನಾಟಕದಲ್ಲಿ ಭಾರತ್ ಜೋಡೊ ಯಾತ್ರೆ ನಡೆಸಲಿರುವ ರಾಹುಲ್ ಅ.17 ಮತದಾನಕ್ಕಾಗಿ ದೆಹಲಿಗೆ ಹೋಗುವ ಬದಲು ಬೆಂಗಳೂರಿನ ಕೆಪಿಸಿಸಿ ಕಚೇರಿಯ ಮತಗಟ್ಟೆಯಲ್ಲೇ ಮತದಾನ ಮಾಡಲಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮತಗಟ್ಟೆಸ್ಥಾಪಿಸುವ ಹಾಗೂ ರಾಹುಲ್ ಗಾಂಧಿ ಅವರ ಮತದಾನಕ್ಕೆ ಪೂರಕವಾದಂತಹ ವ್ಯವಸ್ಥೆ ರೂಪಿಸುವ ಬಗ್ಗೆ ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಸಭೆ ಸಹ ಮಾಡಲಾಗಿದೆ.ಅಕ್ಟೋಬರ್ 17ಕ್ಕೆ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19ಕ್ಕೆ ಮತ ಎಣಿಕೆ ನಡೆಯಲಿದೆ.
|Mysore Dasara 2022 : ನಾಳೆ ‘ಚಾಮುಂಡಿ ದೇವಿ’ ದರ್ಶನಕ್ಕೆ ಬರುವ ಭಕ್ತರಿಗೆ ಬಹುಮುಖ್ಯ ಮಾಹಿತಿ