ಬೆಂಗಳೂರು : ಆ ಭಾಗ್ಯ ಈ ಭಾಗ್ಯ ಅಂತಾ ರಾಜ್ಯಕ್ಕೆ ದೌರ್ಭಾಗ್ಯ ಕೊಟ್ಟರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ವಾಗ್ಧಾಳಿ ನಡೆಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇವಲ ಅಧಿಕಾರಕ್ಕಾಗಿ ಕೆಲಸ ಮಾಡಬಾರದು, ನಾವು ಮಾಡುವ ಕೆಲಸದ ಮೇಲೆ ನಮಗೆ ನಂಬಿಕೆ ಇರಬೇಕು. ಯೋಜನೆ ಬರಿ ಘೋಷಣೆಯಾಗಬಾರದು ಎಂದು ಕಿಡಿಕಾರಿದರು.
ಆ ಭಾಗ್ಯ ಈ ಭಾಗ್ಯ ಅಂತಾ ರಾಜ್ಯಕ್ಕೆ ದೌರ್ಭಾಗ್ಯ ಕೊಟ್ಟರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ವಾಗ್ಧಾಳಿ ನಡೆಸಿದರು. ರಾಜ್ಯಕ್ಕೆ ದೌರ್ಭಾಗ್ಯ ಕೊಟ್ಟ ಕಾರಣ ಜನರು ಅವರನ್ನು ಕೈ ಹಿಡಿಯಲಿಲ್ಲ. ಎಲ್ಲಾ ವೇಳೆ ಜನರು ಅವರ ಮಾತನ್ನು ನಂಬಲ್ಲ. ಕೆಲವರು ಅಧಿಕಾರ ಕಳೆದುಕೊಂಡಾಗ ನೀರಿನ ಹೊರಗೆ ಇದ್ದ ಮೀನಿನಂತೆ ಆಡುತ್ತಾರೆ. ವಾಮ ಮಾರ್ಗದಿಂದ ಕರ್ನಾಟಕ ಜನರ ಆಶೀರ್ವಾದ ಪಡೆಯಲು ಆಗಲ್ಲ ಎಂದು ಟಾಂಗ್ ನೀಡಿದರು.