ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು(President Droupadi Murmu) ಅವರು ಇಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಇಂದಿನಿಂದ ಎರಡು ದಿನಗಳ ಪ್ರವಾಸದಲ್ಲಿರುವ ಅವರು ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಮುರ್ಮು ಅವರು ಭಾರತದ ರಾಷ್ಟ್ರಪತಿಯಾದ ನಂತ್ರ ಕರ್ನಾಟಕಕ್ಕೆ ಬರುತ್ತಿರುವುದು ಮೊದಲ ಭೇಟಿಯಾಗಿದೆ. ರಾಷ್ಟ್ರಪತಿ ಭವನದ ಪ್ರಕಟಣೆಯ ಪ್ರಕಾರ, ಸೆಪ್ಟೆಂಬರ್ 26 ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿಗಳು ಮೈಸೂರು ದಸರಾ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಅದೇ ದಿನ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಹುಬ್ಬಳ್ಳಿಯಲ್ಲಿ ಆಯೋಜಿಸಿರುವ ‘ಪೌರ ಸನ್ಮಾನ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಧಾರವಾಡದಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ಧಾರವಾಡದ ನೂತನ ಕ್ಯಾಂಪಸ್ನ್ನು ಅವರು ಉದ್ಘಾಟಿಸಲಿದ್ದಾರೆ.
ಮಂಗಳವಾರ ಬೆಂಗಳೂರಿನಲ್ಲಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನ ಇಂಟಿಗ್ರೇಟೆಡ್ ಕ್ರಯೋಜೆನಿಕ್ ಇಂಜಿನ್ಗಳ ಉತ್ಪಾದನಾ ಸೌಲಭ್ಯವನ್ನು ಉದ್ಘಾಟಿಸಲಿದ್ದಾರೆ. ಝೋನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ (ದಕ್ಷಿಣ ವಲಯ) ಕ್ಕೆ ವಾಸ್ತವಿಕವಾಗಿ ಅಡಿಪಾಯ ಹಾಕಲಿದ್ದಾರೆ. ಅದೇ ದಿನ ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯದ ಉದ್ಘಾಟನಾ ಸಮಾರಂಭದಲ್ಲಿ ಭಾಗಿ, ನಂತ್ರ, ಬೆಂಗಳೂರಿನಲ್ಲಿ ಅವರ ಗೌರವಾರ್ಥವಾಗಿ ಕರ್ನಾಟಕ ಸರ್ಕಾರವು ಆಯೋಜಿಸಿರುವ ನಾಗರಿಕ ಸ್ವಾಗತ ಸಮಾರಂಭದಲ್ಲಿ ಭಾಗವಹಿಸುತ್ತಾರೆ.
ಮುರ್ಮು ಅವರು ಸೆಪ್ಟೆಂಬರ್ 28 ಅಂದ್ರೆ, ಬುಧವಾರ ದೆಹಲಿಗೆ ವಾಪಸ್ ಆಗಲಿದ್ದಾರೆ.
Navratri 2023: ನವರಾತ್ರಿಯ ಒಂಭತ್ತು ದಿನಗಳ ಬಣ್ಣಗಳು ಯಾವುವು? ಅವುಗಳ ವಿಶೇಷತೆ ಏನು? ಇಲ್ಲಿ ಓದಿ
BIGG NEWS : `SSLC’ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ : ಈ ಬಾರಿ ಹಳೆಯ ಮಾದರಿಯಲ್ಲೇ ಪರೀಕ್ಷೆ
BIGG NEWS : ನಾಡಗೀತೆ ಕಾಲಮಿತಿ, ಧಾಟಿ ಬಗ್ಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ