ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದ ಎಸ್ ಸಿ-ಎಸ್ ಟಿ ಸಮುದಾಯದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ಪ್ರಸಕ್ತ ಸಾಲಿನಲ್ಲಿ 1 ಸಾವಿರ ಎಸ್ ಸಿ, ಎಸ್ ಟಿ ಹಾಸ್ಟೆಲ್ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.
BIGG NEWS : ಪಡಿತರ ಚೀಟಿದಾರರೇ ಗಮನಿಸಿ : ಮೊಬೈಲ್ ನಂಬರ್ ಅಪ್ ಡೇಟ್ ಮಾಡದಿದ್ರೆ ಸಿಗಲ್ಲ ರೇಷನ್!
ಬೆಂಗಳೂರಿನ ವಿರೂಪಾಕ್ಷಪುರದಲ್ಲಿರುವ ಉದ್ಯಾನಕ್ಕೆ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಉದ್ಯಾನ ಎಂದು ನಾಮಕರಣ ಸಮಾರಂಭದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಪ್ರಸಕ್ತ ಸಾಲಿನಲ್ಲಿ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಮಂಗಳೂರು, ಕಲಬುರಗಿಯಲ್ಲಿ 1 ಸಾವಿರ ಎಸ್ ಸಿ, ಎಸ್ ಟಿ ಹಾಸ್ಟೆಲ್ ಗಳನ್ನು ಸರ್ಕಾರ ನಿರ್ಮಾಣ ಮಾಡಲಿದೆ ಎಂದು ತಿಳಿಸಿದ್ದಾರೆ.
ಇನ್ನು ವಿದ್ಯಾರ್ಥಿಗಳಿಗೆ ಸ್ಪೂರ್ತಿ ದೊರೆಯಲಿ ಎಂಬ ಕಾರಣಕ್ಕೆ ಐದು ವಿದ್ಯಾರ್ಥಿ ನಿಲಯಗಳಿಗೆ ದೀನ್ ದಯಾಳ್ ಉಪಾಧ್ಯಾಯರ ಹೆಸರು ನಾಮಕರಣ ಮಾಡಲಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಹೆಸರಿನಲ್ಲಿ ಎಸ್ ಸಿ, ಎಸ್ ಟಿ ವಿದ್ಯಾರ್ಥಿನಿಲಯಗಳನ್ನು ನಿರ್ಮಿಸಲಾಗುತ್ತಿದೆ. 50 ಹಿಂದುಳಿದ ವರ್ಗಗಳ ಹಾಸ್ಟೆಲ್ ಗಳನ್ನು ಕನಕದಾಸರ ಹೆಸರಿನಲ್ಲಿ ನಿರ್ಮಿಸಲಾಗುತ್ತಿದೆ ಎಂದು ಹೇಳಿದ್ದಾರೆ.
Good News : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಶೀಘ್ರವೇ `ಆರೋಗ್ಯ ಸಂಜೀವನಿ ಯೋಜನೆ’ ಜಾರಿ