ಶಿವಮೊಗ್ಗ : ಶಿವಮೊಗ್ಗದಲ್ಲಿ ಬಂಧಿತರಾಗಿರುವ ಶಂಕಿತ ಉಗ್ರರಾದ ಮಾಚ್ ಮತ್ತು ಯಾಸಿನ್ ನನ್ನು ಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ ನೀಡಿ ಶಿವಮೊಗ್ಗದ 3 ನೇ ಜೆಎಂಎಫ್ ಸಿ ನ್ಯಾಯಾಲಯ ಆದೇಶ ನೀಡಿದೆ.
BIGG NEWS : ಜಾನುವಾರುಗಳಿಗೆ ಚರ್ಮಗಂಟು ರೋಗ ಉಲ್ಬಣ : ಎಚ್ಚರಿಕೆ ವಹಿಸಲು ಪಶುಪಾಲನಾ ಇಲಾಖೆ ಸಲಹೆ
ಶಿವಮೊಗ್ಗದಲ್ಲಿ ಪೊಲೀಸರು ಇಬ್ಬರು ಶಂಕಿತರ ಉಗ್ರರನ್ನು ಬಂಧಿಸಲಾಗಿತ್ತು. ಇಂದಿಗೆ ಶಂಕಿತ ಉಗ್ರರ ನ್ಯಾಯಾಂಗ ಬಂಧನ ಅವಧಿ ಮುಗಿದಿದ್ದು, ಮಾಜ್ ಮತ್ತು ಯಾಸೀನ್ ನನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ಮತ್ತೆ ಐದು ದಿನ ಮಾಚ್ ಮತ್ತು ಯಾಸೀನ್ ಗೆ ಪೊಲೀಸ್ ವಶಕ್ಕೆ ನೀಡಿ ಕೋರ್ಟ್ ಆದೇಶ ನೀಡಿದೆ.