ಚಿತ್ರದುರ್ಗ : ಭ್ರಷ್ಟಾಚಾರ ಹುಟ್ಟು ಹಾಕಿದ್ದೇ ಬಿಜೆಪಿ ಎಂದು ಮಾಜಿ ಸಚಿವ ಹೆಚ್. ಅಂಜನೇಯ ( H. Anjaneya) ವಾಗ್ದಾಳಿ ನಡೆಸಿದ್ದಾರೆ.
ಹೆಚ್.ಆಂಜನೇಯ ಹಿಂದುಳಿದ ವರ್ಗಗಳ ಇಲಾಖೆಯ ಸಚಿವರಾಗಿದ್ದಾಗ ವಸತಿ ನಿಲಯಗಳಿಗೆ ಹಾಸಿಗೆ, ದಿಂಬು ಮತ್ತು ಮಂಚ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಬಿಜೆಪಿ (BJP) ಆರೋಪಕ್ಕೆ ತಿರುಗೇಟು ನೀಡಿದ ಮಾಜಿ ಸಚಿವರು ಭ್ರಷ್ಟಾಚಾರ ಹುಟ್ಟು ಹಾಕಿದ್ದೇ ಬಿಜೆಪಿ ಎಂದು ಮಾಜಿ ಸಚಿವ ಹೆಚ್. ಅಂಜನೇಯ ವಾಗ್ದಾಳಿ ನಡೆಸಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಭ್ರಷ್ಟಾಚಾರ ಹುಟ್ಟು ಹಾಕಿದ್ದೇ ಬಿಜೆಪಿ, ನಮ್ಮ ಸರ್ಕಾರದ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರ ಆಗಿಲ್ಲ ,ರಾಜ್ಯಕ್ಕೆ ರಾಹುಲ್ ಗಾಂಧಿ (Rahul Gandhi) ಆಗಮಿಸುತ್ತಿದ್ದಾರೆ. ಎಲ್ಲೆಡೆ ಕಾಂಗ್ರೆಸ್ ( CONGRESS) ಗಾಳಿ ಬೀಸುತ್ತಿದ್ದು ಕಮಲ ಒಣಗುತ್ತಿದೆ. ರಾಜ್ಯ ಬಿಜೆಪಿ ಸರ್ಕಾರ ನಂ 1 ಭ್ರಷ್ಟ ಸರ್ಕಾರ ಎಂದು ವಾಗ್ಧಾಳಿ ನಡೆಸಿದರು.
ಕಾಜಿರಂಗ ಉದ್ಯಾನವನದಲ್ಲಿ ಜೀಪ್ ಚಾಲನೆ – ಸದ್ಗುರು, ಹಿಮಂತ ಬಿಸ್ವಾ ಶರ್ಮಾ ವಿರುದ್ಧ FIR